ಮಡಿಕೇರಿ : ತಾಲೂಕಿನ ಶಾಸಕರು ಸ್ಥಳಕ್ಕೆ ಆಗಮಿಸಿ ನಿವೇಶನಾ ರಹಿತರ ಸಮಸ್ಯೆ ಪರಿಹರಿಸಿಕೊಡುವಂತೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಮೊಣ್ಣಪ್ಪ ಒತ್ತಾಯಿಸಿದರು.
ಸಮೀಪದ ಹೊದ್ದೂರು ಗ್ರಾಮದ ಸರ್ಕಾರಿ ಜಾಗದಲ್ಲಿನ ಅಕ್ರಮ ಒತ್ತುವರಿ ತೆರವುಗೊಳಿಸಿ ನಿವೇಶನ ರಹಿತರಿಗೆ ನಿವೇಶನ ಕೊಡಿಸುವಂತೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಪದಾಧಿಕಾರಿಗಳು 11ನೇ ದಿವಸ ಹೊದ್ದೂರು ಗ್ರಾಮದ ಪೆಗ್ಗೋಳಿ ಎಂಬಲ್ಲಿ ನೀವೇಶನ ಹೋರಾಟ ನಡೆಸುತ್ತಿರುವ ಹೋರಾಟದಲ್ಲಿ ನೇತೃತ್ವ ವಹಿಸಿ ಅವರು ಮಾತನಾಡಿದರು.
ಹೊದ್ದೂರು ಗ್ರಾಮದಲ್ಲಿ 800ಕ್ಕೂ ಅಧಿಕ ನಿರಾಶ್ರಿತ ಬಡ ಕುಟುಂಬಗಳಿಗೆ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಇನ್ನಿತರ ಹಿಂದುಳಿದ ವರ್ಗಗಳಿಗೆ ಸಿಗಬೇಕಾದ ಸರ್ಕಾರಿ ಕಂದಾಯ ಭೂಮಿಯನ್ನು ಭೂ ಮಾಲೀಕರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದು ಇದುವರೆಗೂ ಬಡವರಿಗೆ ನಿವೇಶನ ನೀಡಲು ಸರ್ಕಾರ ಮುಂದಾಗುತ್ತಿಲ್ಲ ಎಂದು ಆರೋಪಿಸಿದ್ರು.
PublicNext
13/11/2024 07:48 pm