ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು : ವಿದ್ಯಾರ್ಥಿ ನಿಲಯಗಳಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಿ : ಅನಿಲ್ ಧಾವನ್

ಕೊಡಗು : ವಿದ್ಯಾರ್ಥಿ ನಿಲಯಗಳ ಅಡುಗೆ ಕೋಣೆಯಲ್ಲಿ ಸ್ವಚ್ಛತೆ, ಆಹಾರ ದಾಸ್ತಾನು ಉಗ್ರಾಣದಲ್ಲಿ ಇಲಿ, ಹೆಗ್ಗಣ ಸೇರದಂತೆ ಗಮನಹರಿಸುವುದು. ವೈಯಕ್ತಿಕ ಪರಿಸರ ಶುಚಿತ್ವ ಕಾಪಾಡುವುದು ಹಾಗೂ ಶುದ್ಧ ಕುಡಿಯುವ ನೀರು ಪೂರೈಸುವುದು, ಆಹಾರ ತಯಾರಿಕೆ ವಿಧಾನ, ನೈರ್ಮಲ್ಯಕ್ಕೆ ಆದ್ಯತೆ ನೀಡುವುದು ಹೀಗೆ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡುವಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗದ ಅಂಕಿತ ಅಧಿಕಾರಿ ಅನಿಲ್ ಧಾವನ್ ಅವರು ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಕಾರದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ನಿಲಯ ಪಾಲಕರು, ನಿಲಯ ಮೇಲ್ವಿಚಾರಕರು ಹಾಗೂ ಸಿಬ್ಬಂದಿಗಳಿಗೆ ನಗರದ ಗಾಂಧಿ ಭವನದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಪಾಡುವ ಕುರಿತು ಏರ್ಪಡಿಸಲಾಗಿದ್ದ ಕಾರ್ಯಾಗಾರದಲ್ಲಿ ಅವರು ಮಾಹಿತಿ ನೀಡಿದ್ರು.

Edited By : Nirmala Aralikatti
Kshetra Samachara

Kshetra Samachara

13/11/2024 07:51 pm

Cinque Terre

400

Cinque Terre

0

ಸಂಬಂಧಿತ ಸುದ್ದಿ