ಕೊಡಗು: ಅಂಗಾಂಗಗಳನ್ನು ದಾನ ಮಾಡುವುದರಿಂದ ಒಬ್ಬ ವ್ಯಕ್ತಿಯ ಜೀವ ಉಳಿಸಬಹುದು ಎಂದು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯ ಸಹ ಪ್ರಾಧ್ಯಾಪಕ ಡಾ .ಶಶಾಂಕ್ ಹೇಳಿದರು.
ಇಲ್ಲಿನ ಮಹಿಳಾ ಸಮಾಜದಲ್ಲಿ ನಾಪೋಕ್ಲು ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್, ನಾಪೋಕ್ಲು ಮಹಿಳಾ ಸಮಾಜದ ವತಿಯಿಂದ ಆಯೋಜಿಸಲಾಗಿದ್ದ ದೇಹ ಮತ್ತು ಅಂಗಾಂಗ ದಾನದ ಕುರಿತ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಆರೋಗ್ಯವಂತ ವ್ಯಕ್ತಿಯ ಅಂಗಾಂಗಗಳನ್ನು ದಾನ ಮಾಡಬಹುದು. ಹೃದಯ ಸೇರಿದಂತೆ ದೇಹದ ವಿವಿಧ ಅಂಗಗಳನ್ನು ದಾನ ಮಾಡಲು ಸಾಧ್ಯವಿದೆ. ಇದಕ್ಕಾಗಿ ನೋಂದಣಿ ಮಾಡಬೇಕು. ನುರಿತ ವೈದ್ಯರ ತಂಡ ಕಾರ್ಯ ನಿರ್ವಹಿಸುತ್ತದೆ. ಅಂಗಾಂಗ ದಾನ ಮಾಡುವ ಮಂದಿ ವೈದ್ಯರ ಸಹಕಾರದಿಂದ ವ್ಯಕ್ತಿಗಳ ಜೀವ ಉಳಿಸಲು ಸಾಧ್ಯ ಎಂದು ಸಮಗ್ರ ಮಾಹಿತಿಯನ್ನು ನೀಡಿದರು.
PublicNext
13/11/2024 07:55 pm