ಮೈಸೂರು: ಮಂಗಳವಾರ ಸಿದ್ದರಾಮಯ್ಯ ಅವರ ಖಾಸಗಿ ಆಪ್ತ ಸಹಾಯಕ ಸಿಟಿ ಕುಮಾರ್ ಅಲಿಯಾಸ್ ದಿನೇಶ್ ಕುಮಾರ್ ಅವರನ್ನು ED ಅಧಿಕಾರಿಗಳು ಕರೆಸಿ ವಿಚಾರಣೆ ನಡೆಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರನ್ನೂ ಕರೆಸಿ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಇದೆ ಎನ್ನುವ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ಮುಡಾ ಹಗರಣದ ಆರೋಪಿಗಳನ್ನು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಇದೀಗ ಇಡಿ ಎಂಟ್ರಿ ಕೊಟ್ಟಿರುವುದರಿಂದ ಸಿಎಂ ಕುಟುಂಬಕ್ಕೆ ಆತಂಕ ಹೆಚ್ಚಿದೆ.
ಸಿಎಂ ಆಪ್ತ ಸಹಾಯಕರಾದ ಕುಮಾರ್ ಅವರು ಸಿದ್ದರಾಮಯ್ಯ ಅವರ ಎಲ್ಲ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದಾರೆ. ಈ ನಡುವೆ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಸಂಬಂಧಿಸಿದ ಮುಡಾ ನಿವೇಶನ ಪತ್ರಗಳಿಗೆ ಕುಮಾರ್ ನಕಲಿ ಸಹಿ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು. ಹಾಗಾಗಿ ನಿನ್ನೆ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿತ್ತು. ಅದರಂತೆ ಅವರು ವಿಚಾರಣೆಗೆ ಹಾಜರಾಗಿದ್ದರು.
ಕುಮಾರ್ ಅವರ ವಿಚಾರಣೆ ಬೆನ್ನಲ್ಲೇ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರನ್ನು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
PublicNext
13/11/2024 08:12 pm