ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕೋರ್ಟ್ ತಡೆಯಾಜ್ಞೆ ಹಿಂಪಡೆದು ತನಿಖೆ ಎದುರಿಸಿ - ಮಾಜಿ ಶಾಸಕ ರಘುಪತಿ ಭಟ್ ಸವಾಲು

ಉಡುಪಿ: ಮಹಾಲಕ್ಷ್ಮೀ ಕೋಆಪರೇಟಿವ್ ಬ್ಯಾಂಕ್ ಮಲ್ಪೆ ಶಾಖೆಯ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿ ಸಾಲ ಪತ್ರದಲ್ಲಿರುವುದು ನಮ್ಮ ಸಹಿ ಎಲ್ಲ ಎಂಬುದಾಗಿ ಸಂತ್ರಸ್ತರು ದಾಖಲಿಸಿರುವ ಎಫ್‌ಐಆರ್‌ಗೆ ಮಹಾ ಲಕ್ಷ್ಮೀ ಬ್ಯಾಂಕ್ ಅಧ್ಯಕ್ಷರಾಗಿರುವ ಶಾಸಕ ಯಶ್‌ಪಾಲ್ ಸುವರ್ಣ ಹೈಕೋರ್ಟ್‌ ನಲ್ಲಿ ವಿಧಿಸಿರುವ ತಡೆಯಾಜ್ಞೆಯನ್ನು ಹಿಂಪಡೆದು ತನಿಖೆಯನ್ನು ಎದುರಿಸಲಿ ಎಂದು ಮಾಜಿ ಶಾಸಕ ಕೆ.ರಘುಪತಿ ಭಟ್ ಸವಾಲು ಹಾಕಿದ್ದಾರೆ.

ಈ ಕುರಿತು ರಘುಪತಿ ಭಟ್, ಬ್ಯಾಂಕ್ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ ಅವರಿಗೆ ಪತ್ರ ಬರೆದಿದ್ದು, ಯಶ್‌ಪಾಲ್‌ ಸುವರ್ಣ ಸಿ.ಬಿ.ಐ., ಇ.ಡಿ. ಇನ್ನಿತರ ಯಾವುದೇ ತನಿಖೆ ಎದುರಿಸಲು ಸಿದ್ಧರಿದ್ದೇವೆ ಎಂದು ಹೇಳಿರುವುದು ಪ್ರಶಂಸಾರ್ಹ. ಆದರೆ ಈ ತನಿಖೆಗಳನ್ನು ನಡೆಸುವ ಮುಂಚಿತವಾಗಿ ತಮ್ಮದೇ ವ್ಯಾಪ್ತಿಯಲ್ಲಿ ಉಡುಪಿ ಹಾಗೂ ಇನ್ನಿತರ ಪೊಲೀಸ್‌ ಠಾಣೆಗಳಲ್ಲಿ ಸಂತ್ರಸ್ತರು ಈಗಾಗಲೇ ನೀಡಿರುವ ದೂರಿಗೆ ಆಗಿರುವ ಎಫ್‌ಐಆ‌ರ್ ಮೇಲೆ ತಾವು ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದು, ಈ ತಡೆಯಾಜ್ಞೆಯನ್ನು ತೆರವುಗೊಳಿಸಿ, ತನಿಖೆಗೆ ಸ್ಪಂದಿಸಿ ಎಂದು ಆಗ್ರಹಿಸಿದ್ದಾರೆ.

ಸಂತ್ರಸ್ತರ ಸಾಲದ ಅರ್ಜಿಗಳಲ್ಲಿ ಹಾಗೂ ಸಾಲದ ದಾಖಲಾತಿಗಳಲ್ಲಿ ಸಂತ್ರಸ್ತರು ತಮ್ಮ ಸಹಿ ಅಲ್ಲ ಎಂದು ಹೇಳುತ್ತಿರುವ ಕಾರಣ ಈ ಸಹಿಗಳ ಸತ್ಯಸತ್ಯಾತೆಯನ್ನು ತಿಳಿಯಲು ಪೊಲೀಸ್ ಇಲಾಖೆಯ ಮೂಲಕ ಎಫ್‌ಎಸ್‌ಎಲ್(ವಿಧಿ ವಿಜ್ಞಾನ ಪ್ರಯೋಗಾಲಯ) ಪರೀಕ್ಷೆಗೆ ಕಳುಹಿಸಲು ಅನುವು ಮಾಡಿಕೊಡಬೇಕು. ಆದುದರಿಂದ ಹೈಕೋರ್ಟ್‌ನಿಂದ ತಡೆಯಾಜ್ಞೆ ಯನ್ನು ಹಿಂಪಡೆದು ನ್ಯಾಯಯುತವಾದ ತನಿಖೆ ನಡೆದು ಸತ್ಯಸತ್ಯಾತೆಯು ಹೊರಬರಬೇಕು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

Edited By : PublicNext Desk
PublicNext

PublicNext

13/11/2024 08:26 pm

Cinque Terre

14.26 K

Cinque Terre

1

ಸಂಬಂಧಿತ ಸುದ್ದಿ