ಚಿಕ್ಕಮಗಳೂರು: ಶಾಸಕ ಹೆಚ್.ಡಿ ತಮ್ಮಯ್ಯನವರ ನೇತೃತ್ವದಲ್ಲಿ ತಾಲೂಕಿನ ಹಿರೇಗೌಜದಲ್ಲಿ ಜನಸಂಪರ್ಕ ಸಭೆ ನಡೆಯಿತು. ಸಭೆಯಲ್ಲಿ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಬಸ್ ನಿಲ್ದಾಣ, ರಸ್ತೆ, ಕುಡಿಯುವ ನೀರು, ಚರಂಡಿ ಹೀಗೆ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಶಾಸಕರಿಗೆ ಮನವಿ ಮಾಡಿದರು. ಅಲ್ಲದೇ ಜಮೀನಿನ ವಯಕ್ತಿಕ ಸಮಸ್ಯೆಗಳ ಕುರಿತು ಗ್ರಾಮದ ಮಹಿಳೆಯರು ಶಾಸಕರ ಗಮನಕ್ಕೆ ತಂದರು. ಈ ಎಲ್ಲಾ ಸಮಸ್ಯೆಗಳನ್ನು ಶಾಸಕ ಹೆಚ್.ಡಿ ತಮ್ಮಯ್ಯ ಆದಷ್ಟು ಬೇಗ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ನಾರಾಯಣ ಕನಕರೆಡ್ಡಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Kshetra Samachara
13/11/2024 08:45 pm