ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಜಮೀರ್ ವಿರುದ್ಧ ಮಾತಿನ ವಾಗ್ದಾಳಿ - ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್

ಬೆಂಗಳೂರು: ಚನ್ನಪಟ್ಟಣ ಬೈ ಎಲೆಕ್ಷನ್ ಪ್ರಚಾರದ ವೇಳೆ ಸಚಿವ ಜಮೀರ್ ಅಹ್ಮದ್, ಕೇಂದ್ರ ಸಚಿವ ಕುಮಾರಸ್ವಾಮಿಯನ್ನ ಟೀಕಿಸುವ ಭರದಲ್ಲಿ ಕರಿಯಾ ಕುಮಾರಸ್ವಾಮಿ ಎಂದು ನಿಂಧಿಸಿದ್ರು. ಇದಕ್ಕೆ ವ್ಯಾಪಕ‌ ಟೀಕೆ ವ್ಯಕ್ತವಾಗಿತ್ತು. ಇದೇ ವಿಚಾರಕ್ಕೆ ಪುನೀತ್‌ ಕೆರೆಹಳ್ಳಿ ಜಮೀರ್ ವಿರುದ್ಧ ಧರ್ಮ ಹಾಗೂ ಜಾತಿ ಹೆಸರಲ್ಲಿ ನಿಂಧಿಸಿ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋವೊಂದನ್ನ ಹರಿಬಿಟ್ಟಿದ್ದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ಇದು ಧರ್ಮ ಧರ್ಮಗಳ ನಡುವೆ ಪ್ರಯೋಧನಕಾರಿ ಹೇಳಿಕೆ ಎಂದು ದೂರಿನ‌ ನೀಡಿದ ಹಿನ್ನೆಲೆ ಪುನೀತ್ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

Edited By : Nagesh Gaonkar
PublicNext

PublicNext

13/11/2024 10:03 pm

Cinque Terre

23.99 K

Cinque Terre

11