ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ ಹಾಗೂ ಕೇಸ್‌ಅನ್ನು ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿದೆ.
ಇಂದು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಕೇಸನ್ನು ಸಿಬಿಐ ತನಿಖೆಗೆ ವಹಿಸುವಂತೆ ಯೂನಿಯನ್ ಬ್ಯಾಂಕ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠವು ನಡೆಸಿತು.
ತನಿಖೆಯ ಹೊಣೆಯನ್ನು ಸಿಬಿಐಗೆ ವಹಿಸಲು ನಿರಾಕರಿಸಿದ ನ್ಯಾಯಪೀಠವು, ಯೂನಿಯನ್ ಬ್ಯಾಂಕ್ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದಂತ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಮಾಜಿ ಸಚಿವ ಬಿ.ನಾಗೇಂದ್ರಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.
PublicNext
13/11/2024 10:09 pm