ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಂಬೇಡ್ಕರ್ ಚಾರಿತ್ರ್ಯಕ್ಕೆ ಧಕ್ಕೆ ತಂದ ಮಾಜಿ ಶಾಸಕ ಅಜ್ಜೀಮ್ ಪೀರ್ ಖಾದ್ರಿ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು

ಹುಬ್ಬಳ್ಳಿ: ಅಂಬೇಡ್ಕರ್ ಅವರ ಚಾರಿತ್ರ್ಯಕ್ಕೆ ಧಕ್ಕೆ ತರುವ ನಿಟ್ಟಿನಲ್ಲಿ ಮಾಜಿ ಶಾಸಕ ಅಜ್ಜೀಮ್ ಪೀರ್ ಖಾದ್ರಿ ಸಭೆಯಲ್ಲಿ ಮಾತನಾಡಿ ದಲಿತ ಸಮುದಾಯದ ನಡುವೆ ಗೊಂದಲ ಸೃಷ್ಟಿ ಮಾಡಿದ್ದಾರೆ. ಹೀಗಾಗಿ ಇವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಶಿಗ್ಗಾವಿ ಉಪ ಚುನಾವಣೆಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡುತ್ತಾ ಅಂಬೇಡ್ಕರ್ ಅವರು ಮುಸ್ಲಿಂ ಧರ್ಮಕ್ಕೆ ಮಾತಾಂತರ ಆಗುವ ನಿಟ್ಟಿನಲ್ಲಿ ಮುಂದಾಗಿದ್ದರು ಎಂಬ ಹೇಳಿಕೆಯನ್ನು ಮಾಜಿ ಶಾಸಕ ಅಜ್ಜೀಮ್ ಪೀರ್ ಖಾದ್ರಿ ನೀಡಿದ್ದರು. ದಲಿತ ಸಮುದಾಯದಲ್ಲಿ ಗೊಂದಲ ಸೃಷ್ಟಿ ಮಾಡುವ ಉದ್ದೇಶದಿಂದ ಈ ರೀತಿಯಾದ ಹೇಳಿಕೆಯನ್ನು ನೀಡಿದ್ದರು ಎನ್ನಲಾಗಿದೆ. ಹೀಗಾಗಿ ಇವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರಾಮಲಿಂಗ ಎಂಬುವರು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸದ್ಯ ಉಪ ಚುನಾವಣೆ ಸಂದರ್ಭದಲ್ಲಿ ಮತದಾರರ ಮನಸ್ಸನ್ನು ಓಲೈಕೆ ಮಾಡುವ ಉದ್ದೇಶದಿಂದ ಇತಿಹಾಸ ಮರೆತು ಮತನಾಡುತ್ತಿರೋದು ಅತ್ಯಂತ ದುರಂತದ ಸಂಗತಿ. ಇತಿಹಾಸ ತಿರುಚಿ ಮಾತನಾಡಿದ ಮಾಜಿ ಶಾಸಕ ಅಜ್ಜೀಮ್ ಪೀರ್ ಖಾದ್ರಿ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸರು ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ವಿನಯ ರೆಡ್ಡಿ ಕ್ರೈಂ ಬ್ಯುರೋ ಪಬ್ಲಿಕ್ ನೆಕ್ಸ್ಟ್

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

13/11/2024 10:25 pm

Cinque Terre

127.77 K

Cinque Terre

9

ಸಂಬಂಧಿತ ಸುದ್ದಿ