ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದಲ್ಲಿ ಪುರಸಭೆಯಿಂದ ನಡೆದ ತೆರವು ಕಾರ್ಯಾಚರಣೆಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಬಸ್ ನಿಲ್ದಾಣದ ಮುಂಭಾಗದಲ್ಲಿ ಫುಟ್ ಪಾತ್ ಮೇಲಿನ ಅಂಗಡಿಗಳ ತೆರವು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಡಬ್ಬಾ ಅಂಗಡಿಗಳ ವ್ಯಾಪಾರಸ್ಥರು ವಿರೋಧ ವ್ಯಕ್ತಪಡಿಸಿ ಅಧಿಕಾರಿಗಳೊಂದಿಗೆ ವಾಗ್ವಾದಕ್ಕಿಳಿದರು. ಈ ಸಂದರ್ಭ ಮಧ್ಯೆ ಪ್ರವೇಶಿಸಿದ ಪೊಲೀಸರು ವಾತಾವರಣ ತಿಳಿಗೊಳಿಸಿದರು.
ತೆರವು ಕಾರ್ಯಾಚರಣೆಗೆ ಕೋರ್ಟ್ ನಿಂದ ತಡೆಯಾಜ್ಞೆ ತರಲಾಗಿದೆ. ಪುರಸಭೆ ಮುಖ್ಯಾಧಿಕಾರಿಗಳು ಕೋರ್ಟ್ ನೋಟಿಸ್ ಗೆ ಬೆಲೆ ನೀಡದೇ ತೆರವು ಕಾರ್ಯಾಚರಣೆ ಮಾಡಿದ್ದಾರೆ. ಈ ತೆರವು ಕಾರ್ಯಾಚರಣೆ ರಾಜಕೀಯ ಪ್ರೇರಿತವಾಗಿದೆ ಎಂದು ಆರೋಪಿಸಿ ಕೆಲ ವ್ಯಾಪಾರಸ್ಥರು ಬಸ್ ನಿಲ್ದಾಣದ ಮುಂಭಾಗದಲ್ಲೇ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ಸದ್ಯ ತೆರವು ಕಾರ್ಯಾಚರಣೆ ಅರ್ಧಕ್ಕೆ ಸ್ಥಗಿತಗೊಳಿಸಲಾಗಿದ್ದು, ಸ್ಥಳದಲ್ಲಿ ಪೊಲೀಸರು ಬೀಡು ಬಿಟ್ಟಿದ್ದಾರೆ.
PublicNext
13/11/2024 10:27 pm