ಸೊರಬ: ನೌಕರರ ಭರವಸೆಗಳನ್ನು, ಆಶ್ವಾಸನೆಗಳನ್ನು ಈಡೇರಿಸುವಲ್ಲಿ ಸರ್ಕಾರಿ ನೌಕರರ ಸಂಘ ಪ್ರಧಾನ ಪಾತ್ರ ವಹಿಸುತ್ತಿದ್ದು, ಎನ್.ಪಿ.ಎಸ್. ರದ್ದಾಗುವವರೆಗೂ ಹೋರಾಟ ನಿಲ್ಲದು ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್. ಮಂಜುನಾಥ್ ಹೇಳಿದರು.
ಪಟ್ಟಣದ ಗುರುಭವನದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಶಾಖೆಯಿಂದ 2024ರಿಂದ 2029ರ ಅವಧಿಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷರು, ಖಜಾಂಚಿ, ಕಾರ್ಯದರ್ಶಿ ಹಾಗೂ ನಿರ್ದೇಶಕರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಎನ್‌ಪಿಎಸ್ ಸಮಸ್ಯೆ ನೌಕರರಿಗೆ ಪೆಡಂಭೂತವಾಗಿ ಕಾಡುತ್ತಿದೆ. ಎನ್‌ಪಿಎಸ್ ಸಮಸ್ಯೆ ನೀಗಿದ್ದಲ್ಲಿ ನೌಕರರ ಒಂದು ಹಂತದ ಸಮಸ್ಯೆ ಬಗೆಹರಿದಂತಾಗುತ್ತದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಸಂಘವು ಕಾರ್ಯಪ್ರವೃತ್ತವಾಗಲಿದೆ. ನೌಕರರ ಒಗ್ಗಟ್ಟಿನ ಹೋರಾಟದ ಫಲವಾಗಿ ಸರ್ಕಾರದಿಂದ ಏಳನೇ ವೇತನ ಆಯೋಗದ ವರದಿ ಜಾರಿಯಾಗಿದೆ ಮತ್ತು ನೌಕರರಿಗೆ ಆರೋಗ್ಯ ಸಂಜೀವಿನಿ ಸೌಲಭ್ಯ ದೊರೆತಿದೆ. ಯಾವುದೇ ವೈಯುಕ್ತಿಕ ಹಿತಾಸಕ್ತಿ ಇಲ್ಲದೇ ನೌಕರರ ಹಿತ ಕಾಯುವುದು ಸಂಘದ ಪದಾಧಿಕಾರಿಗಳ ಮುಖ್ಯ ಧ್ಯೇಯವಾಗಿದೆ ಎಂದರು.
ವರದಿ: ಮಧುರಾಮ್, ಪಬ್ಲಿಕ್ ನೆಕ್ಸ್ಟ್ ಸೊರಬ
PublicNext
13/11/2024 10:33 pm