ಮುಲ್ಕಿ: 71ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ನವೆಂಬರ್ 16ರಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ .ಎಂ ಎನ್ ರಾಜೇಂದ್ರ ಕುಮಾರ್ ರವರ ನೇತೃತ್ವದಲ್ಲಿ ಮಂಗಳೂರು ಕರಾವಳಿ ಮೈದಾನದಲ್ಲಿ ನಡೆಯಲಿರುವ ಸಮಾವೇಶಕ್ಕೆ ಪೂರಕವಾಗಿ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ವತಿಯಿಂದ ಸಹಕಾರಿ ಧ್ವಜ ಅಳವಡಿಸಿ ಮತ್ತು ಫ್ಲೆಕ್ಸ್ ಗಳನ್ನು ಅಳವಡಿಸಿ ಕಾರ್ಯಕ್ರಮಕ್ಕೆ ಸ್ವಾಗತದ ಭರದ ಸಿದ್ಧತೆ ನಡೆದಿದೆ.
ಕಾರ್ಯಕ್ರಮ ದಿನದಂದು ಸೊಸೈಟಿ ಕಛೇರಿಗಳಿಗೆ ರಜೆ ನೀಡಿ ಮಂಗಳೂರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ವಸಂತ್ ಬರ್ನಾಡ್ ಕರೆ ನೀಡಿದ್ದಾರೆ.
Kshetra Samachara
13/11/2024 10:53 pm