ಬೆಂಗಳೂರು: ಧರ್ಮ ಹಾಗೂ ಜಾತಿ ನಿಂಧನೆ ಆರೋಪದಲ್ಲಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ, ತಡರಾತ್ರಿ ನ್ಯಾಯಾಧೀಶರ ಮುಂದೆ ಚಾಮರಾಜಪೇಟೆ ಪೊಲೀಸರು ಹಾಜರುಪಡಿಸಿದ್ದಾರೆ.
ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಸಚಿವ ಜಮೀರ್ ಅಹ್ಮದ್ ಕೇಂದ್ರ ಸಂಸದ ಎಚ್.ಡಿ ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡಿದ್ದ ಹೇಳಿಕೆ ರಿಯಾಕ್ಟ್ ಮಾಡಿದ್ದ ಪುನೀತ್ ಕೆರೆಹಳ್ಳಿ ಬೇಕಾಬಿಟ್ಟಿ ಮಾತನಾಡಿದ್ದರು. ಈ ವಿಚಾರ ಹಿನ್ನೆಲೆ ಚಾಮರಾಜಪೇಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗುತ್ತು. ಈ ಹಿನ್ನೆಲೆ ಚಾಮರಾಜಪೇಟೆ ಪೊಲೀಸರು ಪುನೀತ್ ಕೆರೆ ಹಳ್ಳಿಯನ್ನ ಬಂಧಿಸಿದ್ದಾರೆ.
PublicNext
14/11/2024 07:31 am