ನವದೆಹಲಿ: ರಾಷ್ಟ್ರ ರಾಜಧಾನಿಯ 24 ಗಂಟೆಗಳ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ, ಪ್ರತಿದಿನ ಸಂಜೆ 4 ಗಂಟೆಗೆ ದಾಖಲಾಗುತ್ತದೆ. ಮಂಗಳವಾರ ಎಕ್ಯೂಐ 334 ರಷ್ಟಿತ್ತು. ಬುಧವಾರ 418ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ.
ಎಕ್ಯೂಐ ಪ್ರಮಾಣ ಸೊನ್ನೆಯಿಂದ 50 ರಷ್ಟಿದ್ದರೆ 'ಉತ್ತಮ' ಎಂದು, 51ರಿಂದ 100 ರಷ್ಟಿದ್ದರೆ 'ಸಮಾಧಾನಕರ', 101 ರಿಂದ 200 ರಷ್ಟಿದ್ದರೆ 'ಸಾಧಾರಣ', 201 ರಿಂದ 300 ರಷ್ಟಿದ್ದರೆ 'ಕಳಪೆ' ಹಾಗೂ 301 ರಿಂದ 400 ರಷ್ಟಿದ್ದರೆ 'ಅತ್ಯಂತ ಕಳಪೆ' ಎಂದು ಹೇಳಲಾಗುತ್ತದೆ.
PublicNext
14/11/2024 08:36 am