ಚಿಕ್ಕಮಗಳೂರು : ಪ್ರತಿಯೊಬ್ಬ ಮಹಿಳೆಗೂ ಸ್ವತಂತ್ರವಾಗಿ ಬದುಕುವ ಮತ್ತು ಮುಕ್ತವಾಗಿ ತನ್ನನ್ನು ತಾನು ವ್ಯಕ್ತಪಡಿಸಿಕೊಳ್ಳುವ ಸ್ವತಂತ್ರವಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಹನುಮಂತಪ್ಪ ಹೇಳಿದರು.
ಇತ್ತೀಚಿನ ದಿನಗಳಲ್ಲಿ ಮಹಿಳೆಯರು ತಮ್ಮ ಮನೆ ಮತ್ತು ಕೆಲಸದ ಸ್ಥಳಗಳಲ್ಲಿ ತಾರತಮ್ಯ ಅಥವಾ ಇತರೆ ಅನ್ಯಾಯದ ಕೃತ್ಯಗಳು ಹಾಗೂ ಅಪರಾಧಗಳನ್ನು ಎದುರಿಸುತ್ತಿದ್ದಾರೆ. ಇವರನ್ನು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಸುಧಾರಿಸಿ ಸಮಾಜದಲ್ಲಿ ನಿರ್ಭೀತಿಯಿಂದ ಜೀವಿಸುವ ವಾತಾವರಣ ಸೃಷ್ಠಿಸಿಕೊಳ್ಳಲು ಪ್ರತಿಯೊಬ್ಬ ಮಹಿಳೆಯು ಕಾನೂನು ತಿಳಿಯುವುದು ಅವಶ್ಯಕವಾಗಿದೆ ಎಂದರು.
ಮಹಿಳೆಯರ ಮೇಲೆ ದೌರ್ಜನ್ಯವು ಅನಾದಿ ಕಾಲದಿಂದಲೂ ನಡೆದುಕೊಂಡು ಬರುತ್ತಿದ್ದು, ಇವುಗಳ ತಡೆಗಟ್ಟುವಲ್ಲಿ ಸಂವಿಧಾನಬದ್ಧ ಹಕ್ಕು ಮತ್ತು ಸಂರಕ್ಷಣೆಗೆ ಸಂಬಂಧಿಸಿದ ಕಾನೂನುಗಳಿವೆ. ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ ಕಂಡು ಬಂದಲ್ಲಿ ಅಪರಾಧ ಎಸಗಿದವರು ಕಠಿಣ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ. ಮಹಿಳೆಯರು ಮತ್ತು ಮಕ್ಕಳು ಕಡ್ಡಾಯವಾಗಿ ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ, ವರದಕ್ಷಿಣೆ ನಿಷೇಧ ಕಾಯ್ದೆ, ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆ ಕಾಯ್ದೆ, ಬಾಲ್ಯ ವಿವಾಹ ತಡೆ ಕಾಯ್ದೆ, ಫೋಕ್ಸೋ ಕಾಯ್ದೆ, ಕಾನೂನು ಬದ್ಧ ದತ್ತು ಸ್ವೀಕಾರ, ಮಹಿಳೆಯರಿಗೆ ಸಮಾನ ಆಸ್ತಿ ಹಕ್ಕು, ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ನಿಷೇಧ ಕಾಯ್ದೆ ಹಾಗೂ ಕಾನೂನುಗಳಿಗೆ ಸಂಬಂಧಪಟ್ಟ ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದ ಅವರು ಪ್ರತಿಯೊಬ್ಬರು ಮಹಿಳಾ ರಕ್ಷಣೆಗೆ ಮುಂದಾಗಬೇಕು ಎಂದು ತಿಳಿಸಿದರು.
PublicNext
14/11/2024 12:37 pm