ಬೆಂಗಳೂರು : ಶಾಸಕರುಗಳಿಗೆ ಬಿಜೆಪಿ 50 ಕೋಟಿ ಆಫರ್ ಮಾಡುತ್ತಿದೆ ಎಂಬ ಸಿಎಂ ಹೇಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ಬೈ ವಿಜಯೇಂದ್ರ ದಾಖಲೆಗಳು ಇದ್ದರೆ ತನಿಖೆ ಮಾಡಿಸಿ ಎಂದು ಆಗ್ರಹಿಸಿದ್ದರು.
ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾಧ್ಯಮಗಳು ಪ್ರಶ್ನೆ ಮಾಡಿದಾಗ ವಿಜಯೇಂದ್ರ ಮೊನ್ನೆ ಮೊನ್ನೆ ಬಂದಿರೋರು ಅವರ ಬಗ್ಗೆ ಯಾಕೆ ಕೇಳ್ತೀರಾ ಎಂದು ಸಿಎಂ ಗರಂ ಆದರು. ಇನ್ನೂ ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರದ ಉಪಚುನಾವಣೆಯಲ್ಲಿ ನಮಗೆ ಇರೋ ಮಾಹಿತಿ ಪ್ರಕಾರ ಮೂರು ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
PublicNext
14/11/2024 12:38 pm