ಬೆಂಗಳೂರು : ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ಜಿ.ಕೆ.ವಿ.ಕೆ ಆವರಣದಲ್ಲಿ ಏರ್ಪಡಿಸಲಾಗಿದ್ದ ಮೂರು ದಿನಗಳ ಕೃಷಿ ಮೇಳ ಕಾರ್ಯಕ್ರಮ ಕೃಷಿ ಸಚಿವರು ಉದ್ಘಟಿಸಿದ್ದಾರೆ... ಬಳಿಕ ಮಾತನಾಡಿದ ಅವರು ರೈತರು ಕೃಷಿ ವಿಶ್ವವಿದ್ಯಾಲಯಗಳು ನಡೆಸುವ ಸಂಶೋಧನೆಗಳು ಹಾಗೂ ತಂತ್ರಜ್ಞಾನಗಳನ್ನು ಬಳಸಿ ಮಿಶ್ರ ಬೇಸಾಯ ಪದ್ದತಿ ಮಾಡಿದರೆ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಲಾಭ ಪಡೆಯಲು ಸಾಧ್ಯ ಎಂದರು.
ರಾಷ್ಟ್ರದಲ್ಲಿ 75% ಜನರು ಕೃಷಿಯನ್ನು ಅವಲಂಭಿಸಿದ್ದು 60ರ ದಶಕದಲ್ಲಿ ದೇಶದಲ್ಲಿ ನಡೆದ ಹಸಿರು ಕ್ರಾಂತಿ ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಸ್ವಾವಲಂಭನೆ ಸಾಧಿಸಲು ಸಾಧ್ಯವಾಯಿತು. 1964-65ರಲ್ಲಿ ಆಹಾರ ಉತ್ಪಾದನೆ ರಾಷ್ಟ್ರಮಟ್ಟದಲ್ಲಿ 45.4 ಮಿಲಿಯನ್ ಟನ್‌ಗಳಷ್ಟಿದ್ದು, 2023-24ರ ಸಾಲಿಗೆ 332.22 ಮಿಲಿಯನ್ ಟನ್‌ಗಳಿಗೆ ಏರಿಕೆಯಾಗಿದೆ. 2047ರ ವೇಳೆಗೆ 437 ಮಿಲಿಯನ್ ಟನ್‌ಗೆ ಯೋಜನೆಯನ್ನು ರೂಪಿಸಿದೆ ಎಂದರು.
PublicNext
14/11/2024 01:54 pm