ಚಿಕ್ಕಮಗಳೂರು: 2024-25 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಎಫ್‌ಎಕ್ಯೂ ಗುಣಮಟ್ಟದ ರಾಗಿ, ಭತ್ತ ಖರೀದಿಸಲು ಬೆಂಬಲ ಬೆಲೆ ನಿಗಧಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ತಿಳಿಸಿದರು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ 2024-25 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ, ಭತ್ತ ಖರೀದಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾಮಾನ್ಯ ಭತ್ತ ಕ್ವಿಂಟಾಲ್‌ಗೆ ರೂ.2,300, ಭತ್ತ ಗ್ರೇಡ್-ಎ ರೂ. 2,320 ರಂತೆ ಹಾಗೂ ರಾಗಿ ಕ್ವಿಂಟಾಲ್‌ಗೆ ರೂ. 4,290ರಂತೆ ಖರೀದಿಸಲಾಗುವುದು. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ವಹಿಸಬೇಕು. ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿಯನ್ನಾಗಿ ಸರ್ಕಾರ ನೇಮಕ ಮಾಡಿದ್ದು, ಖರೀದಿ ಪ್ರಕ್ರಿಯೆಯು ಇವರ ಮುಖಾಂತರ ನಡೆಯುತ್ತದೆ ಎಂದರು.
Kshetra Samachara
14/11/2024 03:54 pm