ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು : ಮಕ್ಕಳಲ್ಲಿ ಸಂಸ್ಕಾರ ಬೆಳಸಿ - ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು

ತುಮಕೂರು : ಸಮಾಜದಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಪೋಷಕರಿಗೆ ಕರೆ ನೀಡಿದರು.

ನಗರದ ಜಿಲ್ಲಾ ಬಾಲ ಭವನ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬಾಲ ಭವನ ಸೊಸೈಟಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನ ಮಂತ್ರಿ ದಿವಂಗತ ಜವಾಹರ್ ಲಾಲ್ ನೆಹರೂ ಅವರ ಸವಿ ನೆನಪಿಗಾಗಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. “ಮನೆಯೇ ಮೊದಲ ಪಾಠಶಾಲೆ-ತಾಯಿಯೇ ಮೊದಲ ಗುರು” ಎಂಬ ಗಾದೆ ಮಾತಿನಂತೆ ಮಕ್ಕಳಿಗೆ ಮನೆಯಿಂದಲೇ ಸಂಸ್ಕಾರವನ್ನು ಕಲಿಸಬೇಕು. ಮಕ್ಕಳಿಗೆ ಪಠ್ಯಪುಸ್ತಕದ ಹೊರತಾಗಿ ದೈವ ಭಕ್ತಿ, ಸಹಕಾರ ಮನೋಭಾವ, ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ-ಬಲಿದಾನ ಬಗ್ಗೆ ತಿಳಿಸುವ ಮೂಲಕ ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು ಎಂದು ತಿಳಿಸಿದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ ಕುಮಾರ್ ಮಾತನಾಡಿ, ಮಕ್ಕಳು ನೋವು-ನಲಿವುಗಳಲ್ಲಿ ಬೆಳೆಯಬೇಕು. ಪೋಷಕರ ಕಷ್ಟ-ಕಾರ್ಪಣ್ಯಗಳ ಅರಿವು ಅವರಿಗಿರಬೇಕು. ಸಮಾಜದಲ್ಲಿ ಬದುಕುವ ರೀತಿ-ನೀತಿಯನ್ನು ಕಲಿಸುವ ಜವಾಬ್ದಾರಿ ಪೋಷಕರ ಮೇಲಿರುತ್ತದೆ ಎಂದರಲ್ಲದೆ, ರಸ್ತೆಯಲ್ಲಿ ಸಂಚರಿಸುವಾಗ ಎಡ ಬದಿಯಲ್ಲಿಯೇ ಹೋಗುವ, ೧೮ ವರ್ಷದೊಳಗಿನ ಮಕ್ಕಳು ಮೋಟಾರು ವಾಹನಗಳನ್ನು ಚಲಾಯಿಸದಂತೆ, ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಪೋಷಕರು ಮಕ್ಕಳಿಗೆ ಕಾನೂನಿನ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚೇತನ್ ಕುಮಾರ್, ಜಿಲ್ಲಾ ಮಹಿಳಾ ಅಭಿವೃದ್ಧಿ ಅಧಿಕಾರಿ ಪವಿತ್ರ ಸೇರಿದಂತೆ ಮಕ್ಕಳು, ಪೋಷಕರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

14/11/2024 06:08 pm

Cinque Terre

1.14 K

Cinque Terre

0

ಸಂಬಂಧಿತ ಸುದ್ದಿ