ಚಿಕ್ಕಮಗಳೂರು : ಸಾರ್ವಜನಿಕರಲ್ಲಿ ಓದಿನ ಬಗ್ಗೆ ಆಸಕ್ತಿ ಮೂಡಿಸಲು ನವೆಂಬರ್ 14 ರಿಂದ 20 ರವರೆಗೆ ಗ್ರಂಥಾಲಯ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದ್ದು ಪ್ರತಿಯೊಬ್ಬರು ಇದರ ಸದುಪಯೋಗ ಪಡೆದುಕೊಳ್ಳಿ ಎಂದು ನಗರ ಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್ ಹೇಳಿದರು.
ನಗರದ ಕೇಂದ್ರ ಗ್ರಂಥಾಲಯದ ವತಿಯಿಂದ ನಗರದ ಕೇಂದ್ರ ಗ್ರಂಥಾಲಯದಲ್ಲಿ ಇಂದು ಆಯೋಜಿಸಿದ್ದ ಮಕ್ಕಳ ದಿನಾಚರಣೆ ಹಾಗೂ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪುಸ್ತಕಗಳು ಓದುವುದರಿಂದ ಇತಿಹಾಸದ ಜೊತೆಗೆ ಪ್ರಾಪಂಚಿಕ ಜ್ಞಾನ ತಿಳಿಯಲು ಸಹಕಾರಿಯಾಗಿವೆ. ಜೀವನದ ಅನೇಕ ಪ್ರಶ್ನೆಗಳಿಗೆ ಪುಸ್ತಕಗಳ ಮೂಲಕ ಉತ್ತರ ಕಂಡು ಕೊಳ್ಳಬಹುದಾಗಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಓದಿನ ಅಭಿರುಚಿ ಕಡಿಮೆಯಾಗಿದ್ದು, ಅವರಲ್ಲಿ ಓದಿನ ಆಸಕ್ತಿ ಹೆಚ್ಚಿಸಲು ಗ್ರಂಥಾಲಯ ಸಪ್ತಾಹ ಕಾರ್ಯಕ್ರಮವು ಉಪಯುಕ್ತವಾಗಲಿದೆ ಎಂದರು.
Kshetra Samachara
14/11/2024 07:08 pm