ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋವಿಡ್ ಹಗರಣ ತನಿಖೆಗೆ ಹೊಸ ಎಸ್.ಐ.ಟಿ ರಚಿಸಲು ಸಂಪುಟ ಸಭೆ ನಿರ್ಧಾರ

ಬೆಂಗಳೂರು : ಕೋವಿಡ್ ಭ್ರಷ್ಟಾಚಾರದ ಕುರಿತು ಸತ್ಯ ಶೋಧನೆಗಾಗಿ ಜಸ್ಟೀಸ್ ಜಾನ್ ಮೈಕಲ್ ಕುನ್ಹಾ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ನೇಮಿಸಲಾಗಿತ್ತು. ಈ ಆಯೋಗ ತನ್ನ ಕಾರ್ಯ ಅವಧಿಯಲ್ಲಿ ತನಖೆ ನಡೆಸಿ 2 ಮಧ್ಯಂತರ ವರದಿಗಳನ್ನು ನೀಡಿತ್ತು.

ಸತ್ಯ ಸಂಶೋಧನೆ ನಡೆಸಿರುವ ಆಯೋಗದ ವರದಿಯ ಆಧಾರದ ಮೇಲೆ ಮುಂದುವರೆದ ಕ್ರಮಗಳನ್ನು ತೆಗೆದುಕೊಳ್ಳಲು ವಿಶೇಷ ತನಿಖಾ ತಂಡವೊಂದನ್ನು ನೇಮಕ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.

ಈ ಕುರಿತು ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೊಷ್ಠಿ ನಡೆಸಿ ಮಾಹಿತಿ ನೀಡಿದ ಸಂಸದೀಯ ವ್ಯವಹಾರಗಳು ಸಚಿವ ಎಚ್.ಕೆ ಪಾಟೀಲ್,ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ತನಿಖಾ ವರದಿಯ ನಂತರ ಕೋವಿಡ್ ಸಂದರ್ಭದಲ್ಲಿ ಸರ್ಕಾರದ ಅಧಿಕಾರಿಗಳು ಅಧಿಕಾರಸ್ಥ ರಾಜಕಾರಣಿಗಳು ನಡೆಸಿದ ಭ್ರಷ್ಟಾಚಾರ, ಹಗರಣಗಳ ಕುರಿತು ಸತ್ಯಾಂಶಗಳು ಲಭ್ಯವಾಗಿದ್ದವು.

ಕೊರೋನಾ ಸಂದರ್ಭದಲ್ಲಿ 330 ರಿಂದ 400 ರೂ ಗಳಿಗೆ ಲಭ್ಯವಿದ್ದ ಪಿಪಿಇ ಕಿಟ್ ಗಳನ್ನು 2117 ರೂ.ಗೆ ಖರೀದಿಸಲಾಯಿತು. 3 ಲಕ್ಷ ಕಿಟ್ ಖರಿದಿಸಲಾಯಿತು. ಆಮದು ಸಾಗಣೆ ವೆಚ್ಚ ನೀಡಿ ಅನುಮಾನಾಸ್ಪದ ವೆಚ್ಚ ಮಾಡಲಾಯಿತು. ಚೀನಾ ಕಂಪನಿಗಳಿಗೆ ಲಾಭ ಮಾಡಿಕೊಡಲಾಯಿತು.

ಒಂದೇ ದಿನ ಎರಡು ದರಗಳಲ್ಲಿ 2117.53 ಹಾಗು 2104 ರೂ ಗೆ ಖರೀದಿ ಮಾಡಲಾಯಿತು. ಅದೇ ದಿನ 2049 ರೂ ಗಳಂತೆ ಇನ್ನೊಂದು ಕಂಪನಿಯಿಂದ ಖರೀದಿಸಲಾಯಿತು. ನ್ಯಾ. ಮೈಕಲ್ ಡಿ ಕುನ್ಹಾ ಸಲ್ಲಿಸಿದ್ದ ಮಧ್ಯಂತರ ವರದಿಯಲ್ಲಿ ಅಕ್ರಮದ ಉಲ್ಲೇಖ ನಿಯಮ ಬಾಹಿರವಾಗಿ ಖಾಸಗಿ ಲ್ಯಾಬ್‌ಗಳಿಗೆ 6.93 ಕೋಟಿ ಸಂದಾಯದ ಪ್ರಸ್ತಾಪ, ಖಾಸಗಿ ಲ್ಯಾಬ್‌ಗಳಿಗೆ ನಿಯಮ ಬಾಹಿರವಾಗಿ ಹಣ ಸಂದಾಯವಾದ ಆರೋಪ ಐಸಿಎಂಆರ್ ಮಾನ್ಯತೆ ಇಲ್ಲದ ಲ್ಯಾಬ್ಗಳಿಗೆ ಹಣ ಸಂದಾಯ ಮಾಡಿದ ಉಲ್ಲೇಖ ಕೇಂದ್ರ ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಹಣ ಸಂದಾಯ ಮಾಡಿರುವುದಕ್ಕೆ ಆಕ್ಷೇಪ, 8 ಲ್ಯಾಬ್‌ಗಳಿಗೆ 4 ಕೋಟಿ 28 ಲಕ್ಷ ಸಂದಾಯ ಮಾಡಲಾಗಿದೆ ಅಂತ ವರದಿಯಲ್ಲಿ ಪ್ರಸ್ತಾಪ, ಒಪ್ಪಂದ ಮಾಡಿಕೊಳ್ಳದೆ ಲ್ಯಾಬ್‌ಗಳಿಗೆ ಬೇಕಾಬಿಟ್ಟಿ ಹಣ ಸಂದಾಯ ಮಾಡಿರುವುದಕ್ಕೆ ಆಯೋಗ ತರಾಟೆ ಅಕ್ರಮದಲ್ಲಿ ಶಾಮೀಲಾದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕ್ಕೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ಪ್ರಚಾರಕ್ಕಾಗಿ ಇಟ್ಟಿದ್ದ 7 ಕೋಟಿ 3 ಲಕ್ಷ ಹಣದಲ್ಲೂ ಸಾಕಷ್ಟು ಅಕ್ರಮ ನಡೆದಿರುವ ಬಗ್ಗೆ ಉಲ್ಲೇಖ ಚುಕ್ಕಿ ಟಾಕೀಸ್ ಎಂಬ ಸಂಸ್ಥೆಗೆ 8 ಲಕ್ಷ 85 ಸಾವಿರ ನಿಯಮ ಬಾಹಿರವಾಗಿ ಪಾವತಿ ಕೆಲವು ಏಜೆನ್ಸಿಗಳಿಗೆ ಹಣ ಪಾವತಿಸಿದ್ದ ಬಗ್ಗೆ ದಾಖಲೆಯೇ ಇಡದ ಆರೋಗ್ಯ ಇಲಾಖೆ 5 ಕೋಟಿ ರೂ. ಹಣದ ಬಗ್ಗೆ ದಾಖಲೆ ಒದಗಿಸಲಿಲ್ಲ.

ಸಾವಿನ ಬಗ್ಗೆ ಸರಿಯಾಗಿ ಲೆಕ್ಕ ಕೊಡದೇ ಸಾವಿನ ಲೆಕ್ಕ ಪರಿಶೋಧನೆ ನಡೆಸದೇ ನೈಜವಾದ ಸಾವಿನ ಸಂಖ್ಯೆಗಳನ್ನು ಬಚ್ಚಿಟ್ಟ ಸರ್ಕಾರ ನ್ಯಾಯಯುತವಾದ ಯಾವುದೇ ಕ್ರಮ ಕೈಗೊಳ್ಳದೇ ಜನರಿಗೆ ಮೋಸ ಎಸಗಿ, ಅವ್ಯವಹಾರದಲ್ಲಿ ತೊಡಗಿತ್ತು ಎಂದು ಸಚಿವರು ವಿವರಿಸಿದರು. ಈ ಎಲ್ಲಾ ಅವ್ಯವಹಾರ ಕ್ರಮಗಳಲ್ಲಿ ಅಪರಾಧಿ ಅಂಶಗಳನ್ನು ತನಿಖೆ ಮಾಡಿ ಎಫ್.ಐ.ಆರ್, ದೋಷಾರೋಪ ಪಟ್ಟಿ ಮತ್ತು ಅಪರಾಧಿಗಳನ್ನು ಪತ್ತೆ ಹಚ್ಚಲು ಮತ್ತು ಸೂಕ್ತ ಶಿಕ್ಷೆಗೆ ಅಭಿಯೋಜನೆಗೆ ಒಳಪಡಿಸುವ ಮೂಲಕ ಕರ್ನಾಟಕದ ಜನತೆಗೆ ನ್ಯಾಯ ಒದಗಿಸಲು ಸಚಿವ ಸಂಪುಟ ತೀರ್ಮಾನಿಸಿದೆ ಎಂದು ಸಚಿವರು ವಿವರಿಸಿದರು.

Edited By : Nirmala Aralikatti
PublicNext

PublicNext

14/11/2024 09:52 pm

Cinque Terre

33.27 K

Cinque Terre

2