ಹಾವೇರಿ : ಸಿಎಂ ಸಿದ್ದರಾಮಯ್ಯ 50 ಜನ ಕಾಂಗ್ರೆಸ್ ಶಾಸಕರು ಖರೀದಿ ಮಾಡುತ್ತೇವೆ ಅಂತಾ ಹೇಳಿದ್ದಾರೆ. ತಮ್ಮಮ ಮೇಲಿನ ಆಪಾದನೆಯ ದಿಕ್ಕು ಬದಲಿಸಲು ಈ ರೀತಿ ಹೇಳುತ್ತಿದ್ದಾರೆ ಎಂದು ಮಾಜಿ ಸಿಎಂ ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು
ಒಬ್ಬ ರಾಜಕಾರಣಿ ತನ್ನ ಅಸ್ತಿತ್ವಕ್ಕೆ ದಕ್ಕೆ ಬಂದಾಗ, ಆಧಾರ ರಹಿತ ಅರೋಪ ಮಾಡುತ್ತಾರೆ ಎಂದು ಆರೋಪಿಸಿದರು.
ಸಿಎಂ ಸಿದ್ದರಾಮಯ್ಯ ಬಹಳ ಗೊಂದಲ ಇದ್ದಾರೆ ಹತಾಶೆರಾಗಿದ್ದಾರೆ. ಐದು ವರ್ಷ ಅಧಿಕಾರ ಪೂರ್ಣ ಮಾಡಬೇಕು ಎನ್ನುವ ರೀತಿಯಲ್ಲಿದ್ದಾರೆ ಎಂದು ಬೊಮ್ಮಾಯಿ ಆರೋಪಿಸಿದರು. ಮಳೆ ಹಾನಿಗೆ ಸಾಕಷ್ಟು ಬೆಳೆ ಆಸ್ತಿ ಪಾಸ್ತಿ ಹಾನಿಯಾಗಿದೆ. ಒಂದೇ ಒಂದು ಪರಿಹಾರ ಬರುತ್ತಿಲ ಎಂದು ಬೊಮ್ಮಾಯಿ ಆರೋಪಿಸಿದರು. ಗೊಂದಲದ ಯೂಟರ್ನ್ ಸರ್ಕಾರ ಇದು ಎಂದು ಬೊಮ್ಮಾಯಿ ಅಭಿಪ್ರಾಯಪಟ್ಟರು.
PublicNext
15/11/2024 07:36 am