ನಂಜನಗೂಡು: ಅಪರಿಚಿತ ಕಾರಿನ ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಘಟನೆ ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ಚಾಮರಾಜನಗರ ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದ ಲಕ್ಷ್ಮಣ ಎಂಬುವವರ ಪತ್ನಿ ಮಂಜುಳಾ 32 ಮೃತ ದುರ್ದೈವಿ.
ಲಕ್ಷ್ಮಣ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ದೊಡ್ಡ ಕವಲಂದೆ ಗ್ರಾಮದ ಬ್ಯಾಂಕಿಗೆ ಖಾತೆ ತೆರೆಯಲು ತೆರಳಿದ್ದರು. ಈ ವೇಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ನಂಜನಗೂಡು ಕಡೆಯಿಂದ ಚಾಮರಾಜನಗರ ಕಡೆಗೆ ಅತಿ ವೇಗವಾಗಿ ಬಂದ ಕಾರಿನ ಚಾಲಕ ರಸ್ತೆಯ ಬದಿಯಲ್ಲಿ ನಿಂತಿದ್ದ ಬೈಕ್ಗಳಿಗೆ ಡಿಕ್ಕಿ ಹೊಡೆದು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜನರಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ಪರಿಣಾಮ ಮಂಜುಳಾ ತನ್ನ ಮಕ್ಕಳನ್ನು ಬಚಾವ್ ಮಾಡಿದ್ದಾಳೆ. ಕಾರಿನ ಚಕ್ರ ಹೊಟ್ಟೆಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲಿಯೇ ಮಂಜುಳಾ ಮೃತಪಟ್ಟಿದ್ದಾಳೆ. ಲಕ್ಷ್ಮಣ, ಸಿಂಧು, ಶಿವ ಮಲ್ಲು, ನೇಹರ್, ರಾಜಪ್ಪ ಹಾಗೂ ಮೃತ ಮಹಿಳೆಯ ಮಕ್ಕಳಿಗೂ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪರಿಚಿತ ವಾಹನದ ಕಾರಿನ ಚಾಲಕ ಸ್ಥಳದಿಂದ ಪರಾರಿಯಾಗಿದ್ದು,
ಮೃತ ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಕುಟುಂಬಸ್ಥರಿಗೆ ಒಪ್ಪಿಸಲಾಯಿತು.
ಮೃತ ಮಹಿಳೆಯು ಅಪಘಾತಕ್ಕೂ ಮುನ್ನ ಬ್ಯಾಂಕಿಗೆ ಖಾತೆ ತೆರೆಯಲು ಹೋಗಿದ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
PublicNext
15/11/2024 02:29 pm