ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬಿಟ್ಟಂಗಾಲದಲ್ಲಿ ಹಣಕಾಸಿನ ವಿಚಾರವಾಗಿ ನಡೆದ ಗಲಾಟೆಯಲ್ಲಿ ವ್ಯಕ್ತಿಯನ್ನು ಕತ್ತಿಯನ್ನು ಕೊಚ್ಚಿ ಕೊಲೆಗೈದಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಹಣಕಾಸಿನ ವಿಚಾರವಾಗಿ ಬಿಟ್ಟಂಗಾಲ ಗ್ರಾಮದ ನಾಯಡ ಅಪ್ಪಚ್ಚು ಅವರ ಲೈನ್ ಮನೆಯಲ್ಲಿ ವಾಸವಾಗಿರುವ ಜೇನು ಕುರುಬರ ದಾಸ ಹಾಗೂ ಮಂಜುನಾಥ್ ಇಬ್ಬರು ವ್ಯಕ್ತಿಗಳ ನಡುವೆ ಜಗಳವಾಗಿದೆ. ಜಗಳ ವಿಕೋಪಕ್ಕೆ ತಿರುಗಿದ್ದು ಮಂಜುನಾಥ್ ದಾಸನ ಮೇಲೆ ಕತ್ತಿಯಿಂದ ದಾಳಿ ಮಾಡಿದ್ದಾನೆ. ನಂತರ ರಾತ್ರಿ ದಾಸನು ಮದ್ಯಪಾನದಿಂದ ಲೈನ್ ಮನೆಯ ಅಂಗಳದಲ್ಲಿ ಮಲಗಿದ್ದು, ಬೆಳಿಗ್ಗೆ ಎಚ್ಚರವಾಗಿರುವುದಿಲ್ಲ. ನಂತರ ನೋಡಿದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಘಟನೆ ಸಂಬಂಧಿಸಿದ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಮಾಡಿದ ಆರೋಪಿಯನ್ನು ವಿರಾಜಪೇಟೆ ಪೊಲೀಸರು ಬಂಧಿಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
PublicNext
15/11/2024 05:28 pm