ಕೊಡಗು: ಉಪಚುನಾವಣೆಯಲ್ಲಿ ಮೂರು ಕ್ಷೇತ್ರ ನಮಗೆ ಸಿಗುವ ಭರವಸೆ ಇದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶದ ವಿಚಾರ ಮತದಾರರಿಗೆ ಬಿಟ್ಟಿದ್ದು. ಫಲಿತಾಂಶ ಬಂದ ಬಳಿಕವೇ ಎಲ್ಲವೂ ತಿಳಿಯಲಿದೆ. ಆದರೆ, ಮೂರು ಕ್ಷೇತ್ರಗಳು ನಮಗೆ ಸಿಗುವ ಭರವಸೆ ಇದೆ ಎಂದು ಹೇಳಿದರು.
ಒಕ್ಕಲಿಗ ಮತಗಳು ಹೆಚ್ಚು ಬಿದ್ದಿಲ್ಲ ಎಂಬ ಯೋಗೇಶ್ವರ್ ಹೇಳಿಕೆಗೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಅವರನ್ನೇ ಪ್ರಶ್ನೆ ಕೇಳಬೇಕು. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲಾ ಜಾತಿಯವರೂ ಇದ್ದಾರೆ. ಜಾತಿ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ. ಎಲ್ಲ ಜಾತಿಯವರೂ ನಮಗೆ ಮತ ನೀಡಿದ್ದಾರೆ ಎಂದರು. ಕುಮಾರಸ್ವಾಮಿ ಬಗ್ಗೆ ಜಮೀರ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅದು ಅವರ ವೈಯಕ್ತಿಕ ಅಭಿಪ್ರಾಯ. ಪಕ್ಷಕ್ಕೂ ಅದಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.
PublicNext
16/11/2024 05:16 pm