ಮುಂಬೈ : ಮಹಾರಾಷ್ಟ್ರದ ಅಮರಾವತಿಯಲ್ಲಿ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಅನ್ನು ಚುನಾವಣಾ ಆಯೋಗದ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.
ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವಿನ ರಾಜಕೀಯ ಗದ್ದಲದ ನಡುವೆ ರಾಹುಲ್ ಗಾಂಧಿ ಅವರ ಬ್ಯಾಗ್ ಪರಿಶೀಲಿಸಿದ್ದಾರೆ. ಈ ಕುರಿತ ವೀಡಿಯೋವೊಂದು ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ತಪಾಸಣೆ ನಡೆಸಿದ ವೀಡಿಯೋನಲ್ಲಿ ಚುನಾವಣಾ ಅಧಿಕಾರಿಗಳ ಗುಂಪೊಂದು ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸುತ್ತಿರುವುದನ್ನು ತೋರಿಸುತ್ತದೆ
ಒಂದು ದಿನದ ಹಿಂದೆಯಷ್ಟೇ ಜಾರ್ಖಂಡ್ನ ಗೊಡ್ಡಾದಲ್ಲಿ ಹೆಲಿಕಾಪ್ಟರ್ ಟೇಕ್ ಆಫ್ಗೆ ಏರ್ ಟ್ರಾಫಿಕ್ ಕಂಟ್ರೋಲ್ ತಡವಾಗಿ ಅನುಮತಿ ನೀಡಿದ ಪರಿಣಾಮ ರಾಹುಲ್ ಗಾಂಧಿ ಅವರ ಪ್ರಯಾಣ 45 ನಿಮಿಷಗಳ ಕಾಲ ವಿಳಂಬವಾಗಿತ್ತು. ರಾಜ್ಯದ ವಿಧಾನಸಭಾ ಚುನಾವಣೆಯ ಅಂತಿಮ ಹಂತದ ಪ್ರಚಾರಕ್ಕೆ ಅವರು ತೆರಳುತ್ತಿದ್ದ ವೇಳೆ ಅವರ ಹೆಲಿಕಾಪ್ಟರ್ ಟೇಕ್ ಆಫ್ಗೆ ತಡವಾಗಿ ಅನುಮತಿ ನೀಡಲಾಗಿತ್ತು. ಇದರಿಂದ ಸುಮಾರು 45 ನಿಮಿಷಗಳ ಕಾಲ ರಾಹುಲ್ ಹೆಲಿಕಾಪ್ಟರ್ ನಲ್ಲೇ ಕಾದು ಕುಳಿತಿದ್ದರು.
PublicNext
16/11/2024 06:11 pm