ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೊಡಗು ಜಿಲ್ಲೆಯಲ್ಲಿ ವಿದ್ಯುತ್ 13 ಉಪ ಕೇಂದ್ರಗಳ ಸ್ಥಾಪನೆಗೆ ಕ್ರಮ: ಕೆ.ಜೆ.ಜಾರ್ಜ್

ಕೊಡಗು: ಜಿಲ್ಲೆಯಲ್ಲಿ ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಮಾತನಾಡಿದರು. ವಿವಿಧ ವಿದ್ಯುತ್ ಉಪಕೇಂದ್ರಗಳ ಸ್ಥಾಪನೆಗೆ 208 ಕೋಟಿ ರೂ. ವಿನಿಯೋಗ ಮಾಡಲಾಗುತ್ತದೆ ಎಂದು ಹೇಳಿದರು. ಸೋಮವಾರಪೇಟೆ, ಮಾದಾಪುರ, ಮೂರ್ನಾಡು, ಹುದಿಕೇರಿ, ಬಾಳೆಲೆ, ಸಿದ್ದಾಪುರ, ಕೂಡಿಗೆ, ಕೋಪಟ್ಟಿ, ಸಂಪಾಜೆ, ಕೊಡ್ಲಿಪೇಟೆ, ಕಾಟಕೇರಿ, ಕಳತ್ಮಾಡು, ಮರುಗೋಡು ಕೇಂದ್ರಗಳಲ್ಲಿ ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಮುಂದಾಗಲಾಗಿದೆ. ಆ ನಿಟ್ಟಿಲ್ಲಿ ಈಗಾಗಲೇ ಹಲವು ವಿದ್ಯುತ್ ಉಪ ಕೇಂದ್ರಗಳ ಸ್ಥಾಪನೆಗೆ ಟೆಂಡರ್ ಆಹ್ವಾನಿಸಲಾಗಿದೆ ಎಂದರು. ಜಿಲ್ಲೆಯ ಹಾಡಿಗಳು ಸೇರಿದಂತೆ ಎಲ್ಲಾ ಕುಗ್ರಾಮಗಳಿಗೂ ಸಹ ವಿದ್ಯುತ್ ಸಂಪರ್ಕ ಕಲ್ಪಿಸಲು ಪ್ರಯತ್ನಿಸಲಾಗಿದೆ. ಆ ನಿಟ್ಟಿನಲ್ಲಿ ಸೆಸ್ಕ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯ ನಿರ್ವಹಿಸುವಂತೆ ಸಚಿವರು ಸೂಚಿಸಿದರು.

Edited By : Suman K
Kshetra Samachara

Kshetra Samachara

16/11/2024 06:29 pm

Cinque Terre

600

Cinque Terre

0

ಸಂಬಂಧಿತ ಸುದ್ದಿ