ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ದಾಳಿ - ಐದು ದೋಣಿಗಳು ವಶಕ್ಕೆ

ಮಂಗಳೂರು: ಗುರುಪುರ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಅಡ್ಡೆಗೆ ಶನಿವಾರ ಗಣಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ.

ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ಗುರುಪುರ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ್ದಾರೆ. ಈ ಸಂದರ್ಭ ಸ್ಥಳದಲ್ಲಿದ್ದ 5ದೋಣಿಗಳನ್ನು ಒಂದು ಮೋಟಾರು, ಗ್ಯಾಸ್ ಸಿಲಿಂಡರ್ ವಶಪಡಿಸಿಕೊಂಡಿದ್ದಾರೆ.

ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಗಣಿ ಇಲಾಖೆ ಭೂವಿಜ್ಞಾನಿ ಗಿರೀಶ್ ಮೋಹನ್ ಮತ್ತಿತರರು ಇದ್ದರು.

Edited By : Nagaraj Tulugeri
Kshetra Samachara

Kshetra Samachara

16/11/2024 07:29 pm

Cinque Terre

14.4 K

Cinque Terre

0

ಸಂಬಂಧಿತ ಸುದ್ದಿ