ಚಳ್ಳಕೆರೆ: ಶಾಲಾ ಕಲಿಕೆಯ ಜೊತೆಜೊತೆಗೆ ಪ್ರಜಾಪ್ರಭುತ್ವದ ಮೂಲಾಂಶಗಳನ್ನು ಬೆಳೆಸಿದರೆ ಭವಿಷ್ಯದಲ್ಲಿ ಉತ್ತಮ ನಾಗರಿಕರನ್ನು ದೇಶಕ್ಕೆ ಕಾಣಿಕೆಯಾಗಿ ನೀಡಬಹುದು ಎಂದು ಚಳ್ಳಕೆರೆ ಸಿಡಿಪಿಓ ಸಿ. ಹರಿಪ್ರಸಾದ್ ಹೇಳಿದರು.
ನಗರದ ಹೊಂಗಿರಣ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಇಂದು ನಡೆದ ಸಂಸತ್ತು ಚುನಾವಣೆ ಕಾರ್ಯದಲ್ಲಿ ಭಾಗಿಯಾಗಿ ನಂತರ ಮಾತನಾಡಿ, ಮಕ್ಕಳೂ ಸಹ ದೇಶದ ಪ್ರಜೆಗಳಾಗಿರುವುದರಿಂದ ಶಾಲಾ ಕಲಿಕೆಯ ಜೊತೆಜೊತೆಗೆ ಪ್ರಜಾಪ್ರಭುತ್ವದ ಮೂಲಾಂಶಗಳನ್ನು ಬೆಳೆಸಿದರೆ ಭವಿಷ್ಯದಲ್ಲಿ ಉತ್ತಮ ನಾಗರಿಕರಾಗುತ್ತಾರೆ. ಈ ಹಿನ್ನಲೆಯಲ್ಲಿ ಮಕ್ಕಳ ಸಂಸತ್ತು ಚುನಾವಣೆ ಹೆಚ್ಚು ಮಹತ್ವ ಪಡೆದಿದೆ. ಶಾಲೆಯ ಪ್ರತಿಯೊಂದು ಚಟುವಟಿಕೆ ಹಾಗೂ ಕಾರ್ಯಕ್ರಮಗಳಲ್ಲಿ ಮಕ್ಕಳ ಭಾಗವಹಿಸುವಿಕೆ ಮತ್ತು ಅಭಿವ್ಯಕ್ತಿ ಪ್ರಕ್ರಿಯೆ ಅತ್ಯಂತ ಮಹತ್ವದ್ದು. ಶಾಲೆಗೆ ಸಂಬಂಧಿಸಿದ ಕೆಲ ಚಟುವಟಿಕೆಗಳಲ್ಲಿ ನಿರ್ಣಯಗಳನ್ನು ಕೈಗೊಳ್ಳಲು ಮಕ್ಕಳೂ ಕೂಡಾ ಅರ್ಹರು. ಮಕ್ಕಳ ಹಕ್ಕುಗಳ ಒಡಂಬಡಿಕೆಯ ಪ್ರಕಾರ ಮಕ್ಕಳಿಗೆ ಸಂಬಂಧಿಸಿದ ಪ್ರತಿಯೊಂದು ಚಟುವಟಿಕೆ ಹಾಗೂ ನಿರ್ಣಯಗಳಲ್ಲಿ ಪಾಲ್ಗೊಳ್ಳುವ ಹಕ್ಕು ಮಕ್ಕಳಿಗೆ ಇದೆ ಎಂದರು.
ಚುನಾವಣೆ ಪ್ರಕ್ರಿಯೆ ಹೀಗಿತ್ತು ಚುನಾವಣೆ ದಿನಾಂಕ ಘೋಷಣೆ. ನೀತಿ ಸಂಹಿತೆ. ನಾಮಪತ್ರ ಸಲ್ಲಿ. ಹಿಂಪಡೆಯುವುದು. ಪ್ರಚಾರ.ಬಹಿರಂಗ ಸಭೆ.’ಮತಗಟ್ಟೆ, ಬ್ಯಾಲೆಟ್ ಪೇಪರ್, ಬೆರಳಿಗೆ ಶಾಹಿ ಮತದಾನ ಶನಿವಾರ ಬೆಳಗ್ಗೆ 9 ಗಂಟೆಯಿಂದ 3-30 ಮತದಾನದ ಸಮಯ ನಿಗದಿಯಾಗಿತ್ತು. ಮತದಾನ ಮುಗಿದ ನಂತರ ಭದ್ರತಾ ಕೊಠಡಿಯಲ್ಲಿ ಶೇಖರಣೆ ಮಾಡಿ ಎರಡು ದಿನಗಳ ನಂತರ ಮತ ಎಣಿಕೆ ನಡೆಯಲಿದೆ. ಎಲ್ಲವನ್ನೂ ಶಾಲಾ ಚುನಾವಣೆಯಲ್ಲಿ ಬಳಸಲಾಗಿತ್ತು ಮಕ್ಕಳ ಸಂಸತ್ ಚುನಾವಣೆ ಸಾರ್ವತ್ರಿಕ ಚುನಾವಣೆಯನ್ನು ಅಣುಕಿಸುವಂತಿತ್ತು.
ಹೊಂಗಿರಣ ಸಂಸ್ಥೆಯ ಅಧ್ಯಕ್ಷ ರಾಜೇಶ ಗುಪ್ತ ಕಾರ್ಯದರ್ಶಿ ದಯಾನಂದ ಪ್ರಹ್ಲಾದ್, ಟ್ರಸ್ಟಿಗಳಾದ ಶಿವಪ್ರಸಾದ್ ಮಧು ಮಹದೇವ್ ಕುಮಾರ್ ಸೇರಿದಂತೆ ಶಾಲೆಯ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಚುನಾವಣೆ ಪ್ರಕ್ರಿಯಲ್ಲಿ ಭಾಗವಹಿಸಿದ್ದಾರೆ.
PublicNext
16/11/2024 10:54 pm