ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಡವಿ ಸಿದ್ಧೇಶ್ವರ ಮಠ, ಕಾಯಕಯೋಗಿ ಶಿವಲಿಂಗೇಶ್ವರ ಶ್ರೀ ಲಿಂಗೈಕ್ಯ

ಹುಬ್ಬಳ್ಳಿ: ಹುಬ್ಬಳ್ಳಿ ತಾಲ್ಲೂಕಿನ ಮಂಟೂರು, ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಅಡವಿ ಸಿದ್ಧೇಶ್ವರ ಮಠ ಹಾಗೂ ಶಿವಮೊಗ್ಗ ಜಿಲ್ಲೆ ಬಳ್ಳಿಗಾವಿ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಗಳಾಗಿದ್ದ ಶ್ರೀ ಮನಿಪ್ರ ಶಿವಲಿಂಗೇಶ್ವರ ಸ್ವಾಮೀಜಿ (82) ಇಂದು ಬೆಳಿಗ್ಗೆ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ.

ಹೃದಯಾಘಾತವಾಗಿದ್ದ ಸ್ವಾಮೀಜಿಯವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ 11 ದಿನಗಳಿಂದ ತೀವ್ರ ನಿಗಾ ಘಟಕದಲ್ಲಿದ್ದ ಶ್ರೀಗಳು, ಇಂದು ಭಾನುವಾರ ಬೆಳಿಗ್ಗೆ 1 ಗಂಟೆಗೆ ಕೊನೆಯುಸಿರು ಎಳೆದಿದ್ದಾರೆ.

ಹುಬ್ಬಳ್ಳಿ ತಾಲೂಕಿನ ಮಂಟೂರು ಹಾಗೂ ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಅಡವಿ ಸಿದ್ಧೇಶ್ವರ ಮಠ, ಹುಬ್ಬಳ್ಳಿ ಹರುಷದೇವರ ಮಠ, ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಗೆರಕೊಪ್ಪ- ಬೊಪ್ಪಗೊಂಡನಕೊಪ್ಪ ಇಂದುಧರೇಶ್ವರ ಮಠ, ಶಿಕಾರಿಪುರ ತಾಲೂಕು ಬೆಳ್ಳಿಗಾವಿಯ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠ ಹಾಗೂ ಬೀದರ ಜಿಲ್ಲೆ ಬಸವಕಲ್ಯಾಣ ಕೆಳಗಿ ಪೀಠದ ಪೀಠಾಧಿಪತಿಗಳಾಗಿದ್ದರು.

ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಮಂಟೂರು ಗ್ರಾಮದ ಗುರುಪಾದಮ್ಮ ಶಿವಜೋಗಯ್ಯನವರ ಮಗನಾಗಿ, 1943 ಜುಲೈ 2ರಂದು ಜನಸಿದ್ದ ಅವರು ಶ್ರೀಗಳು ತಮ್ಮ‌ ಬಾಲ್ಯ ವಿದ್ಯಾಭ್ಯಾಸವನ್ನು ಮಂಟೂರಿನಲ್ಲಿ ಪೂರ್ಣಗೊಳಿಸಿದ್ದರು. ಶಿವಯೋಗ ಮಂದಿರದಲ್ಲಿ ಅಧ್ಯಯನ ಹಾಗೂ ವಾರಾಣಾಸಿಯಲ್ಲಿ ತಮ್ಮ ಎಂ.ಎ ಸಂಸ್ಕೃತ ಅಧ್ಯಯನ ಮಾಡಿದ್ದರು.

ಮಂಟೂರುನಲ್ಲಿ ಶಿವಲಿಂಗೇಶ್ವರ ಪ್ರೌಢ ಶಾಲೆ ಸ್ಥಾಪಿಸಿ‌ ಮಕ್ಕಳಿಗೆ ಶಿಕ್ಷಣ ನೀಡಿದ್ದಾರೆ.

ಕಲಘಟಗಿ ತಾಲೂಕಿನ ಬಮ್ಮಿಗಟ್ಟಿ ಗ್ರಾಮದ ಅಡವಿ ಸಿದ್ಧೇಶ್ವರ ಮಠವನ್ನು ಭಕ್ತರ ದೇಣಿಗೆ ಹಾಗೂ ಅವಿರತ ಶ್ರಮದಿಂದ ಅಭಿವೃದ್ಧಿ ಪಡಿಸಿದ್ದಾರೆ. ಭಕ್ತರೊಂದಿಗೆ ಸೇರಿ ರಾಜ್ಯಕ್ಕೆ ಮಾದರಿಯಾಗುವಂತಹ ರಥ ನಿರ್ಮಿಸಿದ್ದಾರೆ. ಶ್ರೀಗಳು ಲಿಂಗೈಕ್ಯೆಗೆ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

17/11/2024 10:14 am

Cinque Terre

125.84 K

Cinque Terre

13

ಸಂಬಂಧಿತ ಸುದ್ದಿ