ಚಿಕ್ಕಮಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪರ ಪ್ರಚಾರದ ಭಾಷಣದ ಮಧ್ಯೆ ಕರಿಯ ಕುಮಾರಸ್ವಾಮಿ ಎಂದು ಕೇಂದ್ರ ಸಚಿವ ಹೆಚ್ಡಿಕೆ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ರಾಜ್ಯದೆಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.
ಕಾಫಿನಾಡು ಚಿಕ್ಕಮಗಳೂರಿನಲ್ಲಿಯೂ ಜಮೀರ್ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದೆ. ತಾಲೂಕಿನ ಆಲ್ದೂರು ಪಟ್ಟಣದಲ್ಲಿ ಒಕ್ಕಲಿಗ ಸಮುದಾಯದವರು ಸಚಿವ ಜಮೀರ್ ವಿರುದ್ಧ ಕಿಡಿಕಾರಿದ್ದಾರೆ. ಗುಜುರಿ ಮಾರಿ, ಬಸ್ ಡ್ರೈವರ್ ಆಗಿದ್ದ ಜಮೀರ್ ನನ್ನು ದೇವೇಗೌಡರು ಕರೆತಂದು ಎಂಎಲ್ಎ ಮಾಡಿ ವಿಧಾನಸೌಧದ ಮೆಟ್ಟಿಲು ಹತ್ತಿಸಿದ್ರು.
ಆದರೆ ಈಗ ಕುಮಾರಸ್ವಾಮಿ ವಿರುದ್ಧ ನಾಲಿಗೆ ಹರಿ ಬಿಟ್ಟಿರೋದು ಅವರ ಯೋಗ್ಯತೆ ಏನೆಂದು ತಿಳಿಯುತ್ತೆ. ಜಮೀನಿಂದಲೇ ಕಾಂಗ್ರೆಸ್ ಪಕ್ಷ ಅಂತ್ಯವಾಗುತ್ತೆ. ಆ ಹೇಳಿಕೆಯನ್ನು ಹಿಂಪಡೆದು ತಕ್ಷಣ ಕ್ಷಮೆಯಾಚನೆ ಮಾಡಬೇಕು ಎಂದು ಜಮೀರ್ ಭಾವಚಿತ್ರಕ್ಕೆ ಚಪ್ಪಲಿ ಸೇವೆ ಮಾಡಿ ಒಕ್ಕಲಿಗ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Kshetra Samachara
17/11/2024 03:44 pm