ಕುಶಾಲನಗರ : ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹಕ್ಕೆ ಗ್ರಾಮದಲ್ಲಿ ನಡೆದಿದ್ದ ಮನೆ ಕಳವು ಪ್ರಕರಣವನ್ನು ಬೇಧಿಸಿರುವ ಕುಶಾಲನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಹಕ್ಕೆ ಗ್ರಾಮದ ನಿವಾಸಿ ಸೋಮಶೇಖರ್.ಎಸ್.ಕೆ(24) ಹಾಗೂ ಹೊಳೆನರಸೀಪುರ ತಾಲ್ಲೂಕಿನ ಮಾಚಗೌಡನಹಳ್ಳಿ ಗ್ರಾಮದ ನಿವಾಸಿ ಅಭಿಷೇಕ್.ಎನ್(24) ಬಂಧಿತ ಆರೋಪಿಗಳು. ಬಂಧಿತರಿಂದ 168.02 ಗ್ರಾಂ ಚಿನ್ನಾಭರಣ, ರೂ.2.54 ಲಕ್ಷ ನಗದು, ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಮತ್ತು ಕಬ್ಬಿಣದ ಹಾರೆಯನ್ನು ವಶಪಡಿಸಿಕೊಳ್ಳಲಾಗಿದೆ
Kshetra Samachara
17/11/2024 07:41 pm