ಸಾಗರ : ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ)ತಾಲ್ಲೂಕು ಅಧ್ಯಕ್ಷ ಮನೆ ಮೇಲೆ ದಾಳಿ ಮಾಡಿದ ಅರಣ್ಯ ಇಲಾಖೆ ಅಧಿಕಾರಿಗಳು ಜಿಂಕೆಮಾಂಸವನ್ನು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳ ತಂಡ ಸೂರನಗದ್ದೆ ಗ್ರಾಮದಲ್ಲಿ ವಾಸವಿರುವ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ಮನೆ ಮೇಲೆ ದಾಳಿ ಮಾಡಿದಾಗ ಜಿಂಕೆ ಬೇಟಿಯಾಡಿ ಮಾಂಸವನ್ನಾಗಿ ಪರಿವರ್ತಿಸಿ ಅದನ್ನು ಸಾಂಬಾರು ಮಾಡಿ ಊಟ ಮಾಡುತ್ತಿದ್ದರು.
ಜಿಂಕೆಯನ್ನು ಬೇಟೆಯಾಡಿ ಕೆಲವರು ಮಾಂಸವನ್ನು ಹಂಚಿಕೊಂಡಿದ್ದರು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದು, ಜಿಂಕೆಯ ಚರ್ಮಕ್ಕಾಗಿ ಶೋಧ ನಡೆದಿದೆ. ದಾಳಿಯ ಮಾಹಿತಿ ತಿಳಿದ ಕರವೇ ತಾಲೂಕು ಅಧ್ಯಕ್ಷ ಪರಾರಿಯಾಗಿದ್ದಾರೆ. ಅರೋಪಿಯ ಪತ್ತೆಗೆ ಪ್ರಯತ್ನ ನಡೆಸಿದ್ದೇವೆ ಎಂದು ವಲಯ ಅರಣ್ಯಾಧಿಕಾರಿ ಅಣ್ಣಪ್ಪ ತಿಳಿಸಿದ್ದಾರೆ.
ಅರೋಪಿಯ ವಿರುದ್ದ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಅನ್ವಯ ಪ್ರಕರಣ ದಾಖಲಿಸಲಾಗಿದೆ. ವಲಯ ಅರಣ್ಯಾಧಿಕಾರಿ ಅಣ್ಣಪ್ಪ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಉಪ ವಲಯ ಅರಣ್ಯಾಧಿಕಾರಿ ವಿಜಯಕುಮಾರ್, ಅರಣ್ಯಪಾಲಕರಾದ ಯಶವಂತ್, ಸುಮಿತಾ, ವೇದನಾಯ್ಕ್, ಉಮೇಶ್, ಶಿವನಗೌಡ ಇನ್ನಿತರರು ಪಾಲ್ಗೊಂಡಿದ್ದರು.
Kshetra Samachara
18/11/2024 04:47 pm