ಚಿಕ್ಕಮಗಳೂರು: ರಾಜ್ಯೋತ್ಸವ ನವೆಂಬರ್ ತಿಂಗಳಿಗೆ ಸೀಮಿತವಾಗದೆ ನಿತ್ಯೋತ್ಸವವಾಗಿ ನಮ್ಮಲ್ಲಿ ರೂಢಿಯಾಗಬೇಕು ಎಂದು ಆದಿಚುಂಚನಗಿರಿ
ವಿಶ್ವವಿದ್ಯಾನಿಲಯದ ರಿಜಿಸ್ಟಾರ್ ಡಾ.ಸಿ.ಕೆ.ಸುಬ್ಬರಾಯ ಆಶಯ ವ್ಯಕ್ತಪಡಿಸಿದರು. ನಗರದ ಕುವೆಂಪು ಕಲಾಮಂದಿರದಲ್ಲಿ ಪೂರ್ವಿ ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್, ಯುರೇಕಾ ಅಕಾಡೆಮಿ ಹಾಗೂ ಕನ್ನಡ
ಮತ್ತು ಸಂಸ್ಕೃತಿ ಇಲಾಖೆ ಸಹಭಾಗಿತ್ವದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಪ್ರಯುಕ್ತ `ನಮ್ಮ ನಾಡು-ನಮ್ಮ ಹಾಡು’ ಕಾರ್ಯಕ್ರಮದಡಿ ಆಯೋಜಿಸಿದ್ದ ನಾಡಿನ ಖ್ಯಾತ ಕವಿಗಳ ಕಾವ್ಯ ಗಾಯನ ಕಾರ್ಯಕ್ರಮವನ್ನು ಉದ್ಘಾಟಿಸಿ
ಅವರು ಮಾತನಾಡಿದರು. ಕನ್ನಡದ ಬಗ್ಗೆ ನಮ್ಮಲ್ಲಿ ಅಭಿಮಾನವಿರಬೇಕು. ಹಾಗೆಯೇ ನಮ್ಮ ಸಂಸ್ಕೃತಿ, ನಾಡು-ನುಡಿಯ ಬಗ್ಗೆ ಹೆಮ್ಮೆಪಡಬೇಕು
ಎಂದರು. ಕಳೆದ ಸುಮಾರು 20 ವರ್ಷಗಳ ಹಿಂದೆ ಅನೇಕ ತಂದೆ-ತಾಯಿಯರಲ್ಲಿ ತಮ್ಮ ಮಕ್ಕಳಿಗೆ ಸಂಗೀತ ಕಲಿಸಬೇಕೆಂಬ ಆಕಾಂಕ್ಷೆ ಇದ್ದರೂ ಇಲ್ಲಿ ಅವಕಾಶವೇ ಇರಲಿಲ್ಲ. ಆದರೆ ಇಂದು ಎಂ.ಎಸ್.ಸುಧೀರ್ ಸೇರಿದಂತೆ ಹಲವರು ಆ ಕೊರತೆಯನ್ನು ನೀಗಿಸಿದ್ದಾರೆ. ಸಂಗೀತ ಯುವ ಪೀಳಿಗೆಗೆ ಅತೀ ಮುಖ್ಯ ಎಂದರು.
Kshetra Samachara
18/11/2024 06:14 pm