ಮೊಳಕಾಲ್ಮುರು: ತಮ್ಮೇನಹಳ್ಳಿ ಗ್ರಾಪಂ ವ್ಯಾಪ್ತಿಯ ಬೊಮ್ಮದೇವರಹಳ್ಳಿ ಗ್ರಾಮದಲ್ಲಿ ಭಕ್ತ ಕನಕದಾಸ ಜಯಂತಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.
ಸ್ಥಳೀಯ ಗ್ರಾಮಸ್ಥರಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಪೂಜೆ ಸಲ್ಲಿಸಲಾಯಿತು,ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕನಕದಾಸರ ಭಾವಚಿತ್ರವನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಮೆರವಣಿಗೆ ಮಾಡಲಾಯಿತು.
ಮೆರವಣಿಗೆಯಲ್ಲಿ ಡೊಳ್ಳು ಕುಣಿತ ಗಮನ ಸೆಳೆದವು, ಮಕ್ಕಳು ಯುವಕರು ಡೊಳ್ಳು ಕುಣಿತದ ನಾದಕ್ಕೆ ಕುಣಿದು ಸಂಭ್ರಮಿಸಿದರು.
ಕಾರ್ಯಕ್ರಮದಲ್ಲಿ ಕುರುಬ ಸಮುದಾಯದ ಮುಖಂಡರು ಹಾಗೂ ಕುಲಬಾಂಧವರು ಸೇರಿದಂತೆ ಊರಿನ ಗ್ರಾಮಸ್ಥರು ಮತ್ತು ಯುವಕರು ಭಾಗಿಯಾಗಿದ್ದರು.
Kshetra Samachara
18/11/2024 07:37 pm