ಕಾರವಾರ : ವಿಶ್ವ ಶೌಚಾಲಯ ಮತ್ತು ವಿಶ್ವ ಮಾನವ ಹಕ್ಕುಗಳ ದಿನಾಚರಣೆಯ ಅಂಗವಾಗಿ ಅಂದದ ಶೌಚಾಲಯ ಆನಂದದ ಜೀವನ ಎಂಬ ಘೋಷ ವಾಕ್ಯದೊಂದಿಗೆ ನ. 19 ರಿಂದ ಡಿ. 10 ರವರೆಗೆ ಜಿಲ್ಲೆಯಾದ್ಯಂತ ವಿಶೇಷ ಆಂದೋಲನ ನಡೆಯಲಿದೆ.
ಆಂದೋಲನದಲ್ಲಿ ಜಿಲ್ಲೆಯಲ್ಲಿ ಕಾರ್ಯತ್ಮಕವಲ್ಲದ ಹಾಗೂ ನಿರುಪಯುಕ್ತವಾಗಿರುವ ಸಮುದಾಯ ಶೌಚಾಲಯಗಳನ್ನು ಗುರುತಿಸಲು ಸಮೀಕ್ಷೆ ನಡೆಸಲಾಗುತ್ತದೆ. ಪ್ರಸ್ತುತ ಸ್ಥಿತಿಗತಿ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ಣಯಗಳನ್ನು ಕೈಗೊಳ್ಳಲಾಗುತ್ತಿದೆ.
ನಿರುಪಯುಕ್ತ ಸಮುದಾಯ ಶೌಚಾಲಯಗಳ ದುರಸ್ತಿ, ಮರು ಸ್ಥಾಪನೆ, ವೈಯಕ್ತಿಕ ಶೌಚಾಲಯ ಮತ್ತು ಸಮುದಾಯ ಶೌಚಾಲಯಗಳನ್ನು ಸುಂದರೀಕರಣಗೊಳಿಸಲು ಸಮುದಾಯ ಮಟ್ಟದಲ್ಲಿ ಜಾಗೃತಿ ಮೂಡಿಸಲಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಈಶ್ವರ ಕುಮಾರ ಕಾಂದು ತಿಳಿಸಿದ್ದಾರೆ.
Kshetra Samachara
18/11/2024 10:32 pm