ಮೈಸೂರು: ಸಚಿವ ಜಮೀರ್ ಅಹ್ಮದ್ ಹೇಳಿಕೆ ಬಗ್ಗೆ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಿ ಎಂದು ಪರೋಕ್ಷವಾಗಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಜಮೀರ್ ಹೇಳಿಕೆ ಪಕ್ಷಕ್ಕೆ ಹೊರೆಯಾಗಿದೆ ಎಂದು ಖುದ್ದು ಕೆಪಿಸಿಸಿ ಅಧ್ಯಕ್ಷರೆ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರು ಬೇಕಾದರೆ ಪಕ್ಷದ ಶಿಸ್ತು ಪಾಲನ ಸಮಿತಿಗೆ ವರದಿ ಕೊಟ್ಟರೆ ಶಿಸ್ತುಪಾಲನ ಅಧ್ಯಕ್ಷ ರಹೀಂ ಖಾನ್ ಕ್ರಮ ಕೈಗೊಳ್ಳಬಹುದು. ನಾನು ಈ ಹಿಂದೆ ಎಐಸಿಸಿ ಶಿಸ್ತು ಪಾಲನ ಸಮಿತಿ ಸದಸ್ಯನಾಗಿದ್ದೆ. ಆಗ ಪಕ್ಷಕ್ಕೆ ಹಾನಿಯಾಗುವ ಹೇಳಿಕೆ ಕೊಡುವ ನಾಯಕರು ಎಷ್ಟೇ ದೊಡ್ಡವರಿದ್ದರೂ ನೋಟಿಸ್ ಕೊಟ್ಟು ಕರೆಸುತ್ತಿದ್ದೇವು. ಅಗತ್ಯವಿದ್ದರೆ ಸಸ್ಪೆಂಡ್ ಕೂಡ ಮಾಡುತ್ತಿದ್ದೆವು. ಈಗಲೂ ಕೆಪಿಸಿಸಿ ಅಧ್ಯಕ್ಷರು ಶಿಸ್ತು ಪಾಲನ ಸಮಿತಿ ಗಮನಕ್ಕೆ ಈ ವಿಚಾರ ತರಬಹುದು ಎಂದಿದ್ದಾರೆ. ಅಲ್ಲದೆ ಜಮೀರ್ ಹೇಳಿಕೆಯಿಂದ ಸ್ವಲ್ಪ ಚುನಾವಣೆಯಲ್ಲಿ ಸ್ವಲ್ಪ ಪರಿಣಾಮ ಬೀರುತ್ತಿದೆ ಎಂದು ಪಕ್ಷದ ನಾಯಕರೇ ಹೇಳಿದ್ದಾರೆ ಎಂದಿದ್ದಾರೆ.
PublicNext
19/11/2024 09:56 am