ಮಂಗಳೂರು : ಟೀಂ ಇಂಡಿಯಾ ಸ್ಟಾರ್ ಕ್ರಿಕೆಟ್ ಆಟಗಾರ ಸೂರ್ಯಕುಮಾರ್ ಯಾದವ್ ಅವರು ಪತ್ನಿಯೊಂದಿಗೆ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ, ಶ್ರೀ ಸುಬ್ರಮಣ್ಯ ದೇವರ ದರ್ಶನ ಪಡೆದರು.
ದಂಪತಿ ಸಹಿತ ಕುಕ್ಕೆಗೆ ಭೇಟಿ ನೀಡಿದ ಸೂರ್ಯ ಕುಮಾರ್ ಯಾದವ್, ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆ, ಮಹಾಪೂಜೆ ಅಭಿಷೇಕ ನೆರವೇರಿಸಿದರು. ಈ ವೇಳೆ ಕುಕ್ಕೆ ದೇಗುಲದ ಆಡಳಿತ ಮಂಡಳಿ ವತಿಯಿಂದ ಸೂರ್ಯ ಕುಮಾರ್ ಯಾದವ್ ಅವರನ್ನು ಗೌರವಿಸಲಾಯಿತು.
ಸೂರ್ಯಕುಮಾರ್ ಯಾದವ್ ಪತ್ನಿ ದೇವಿಶಾ ಶೆಟ್ಟಿ ಮೂಲತಃ ಮಂಗಳೂರಿನವರು. ಮುಂಬೈನಲ್ಲಿ ನೆಲೆಸಿರುವ ದೇವಿಶಾ ಹಾಗೂ ಸೂರ್ಯಕುಮಾರ್ ಯಾದವ್ ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು. ಇದೇ ವೇಳೆ ಇಬ್ಬರೂ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದರು. 2016ರಲ್ಲಿ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು. ಜೋಡಿ ಮುಂಬೈನಲ್ಲಿ ನೆಲೆಸಿದ್ದರೂ, ದೇವಿಶಾ ಶೆಟ್ಟಿಯವರು ಊರಿನ ಜೊತೆಗಿನ ಸಂಬಂಧವನ್ನು ಬಿಟ್ಟಿಲ್ಲ. ಸದಾ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಆಗಮಿಸಿ ಇಲ್ಲಿನ ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುತ್ತಾರೆ. ಈ ವೇಳೆ ಸೂರ್ಯಕುಮಾರ್ ಯಾದವ್ ಕೂಡಾ ಪತ್ನಿಗೆ ಸಾಥ್ ನೀಡುತ್ತಿರುತ್ತಾರೆ.
PublicNext
19/11/2024 01:44 pm