ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್ : ಆಸ್ಪತ್ರೆಯಲ್ಲಿ ಮಹಿಳೆ ಮೃತ್ಯು..ವೈದ್ಯರ ವಿರುದ್ಧ ಪ್ರತಿಭಟನೆ

ಬೀದರ್ : ಹುಮ್ನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳ ನಿರ್ಲಕ್ಷಿತನಿಂದ ಮಹಿಳೆಯೆಬ್ಬರು ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಕುಟುಂಬಸ್ಥರು ಹಾಗೂ ಗ್ರಾಮದ ಮುಖಂಡರಿಂದ ಆಸ್ಪತ್ರೆ ಎದುರಿಗೆ ಪ್ರತಿಭಟನೆ ನಡೆಸಿದರು.

ಗ್ರಾಮದ ನಾಗಮ್ಮ ನರಸಪ್ಪ (63) ಮೃತ ಮಹಿಳೆ ಭಾನುವಾರ ಮುಂಜಾನೆ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮುಂಜಾನೆ ವೇಳೆಯೂ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷತನದಿಂದ ಈ ಘಟನೆ ನಡೆದಿದೆ ಎಂದು ಆರೋಪಿಸಿ ಪ್ರತಿಭಟನೆಕಾರರು ವೈದ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಘಟನೆ ಸುದ್ದಿ ತಿಳಿದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಜ್ಞಾನೇಶ್ವರ್ ನಿರ್ಗುಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ನಂತರ ಮಾತನಾಡಿ ಈ ಘಟನೆಗೆ ಕಾರಣರಾದ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ತಕ್ಷಣ ಪ್ರತಿಭಟನೆ ಕೈ ಬಿಟ್ಟಿದ್ದಾರೆ.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ನಾಗರಾಜ್ ಭೋಜ್ಗುಂಡಿ ತಾಲೂಕ ಪಂಚಾಯತ್ ಮಾಜಿ ಅಧ್ಯಕ್ಷ ಶಿವರಾಜ ಗಂಶೆಟ್ಟಿ ಇನ್ನು ಅನೇಕರು ಭಾಗಿಯಾಗಿದ್ದರು.

ವರದಿ:ಯೋಹಾನ್ ಪಿ ಹೊನ್ನಡ್ಡಿ ಬೀದರ್

Edited By : Shivu K
PublicNext

PublicNext

19/11/2024 02:55 pm

Cinque Terre

33.15 K

Cinque Terre

0

ಸಂಬಂಧಿತ ಸುದ್ದಿ