ಹಿರಿಯೂರು : ಕಂದಾಯ ಇಲಾಖೆಗಳಲ್ಲಿ ನಕಲಿ ದಾಖಲೆಗಳ ಸೃಷ್ಟಿಸಿ ಸರ್ಕಾರಿ ಸೌಲಭ್ಯಗಳನ್ನು ಪಡೆಯುತ್ತಿರುವುದು ಬಗರು ಹುಕ್ಕಂ ಸಾಗುವಳಿ ಮಾಡುತ್ತಿರುವ ರೈತರಿಗೆ ಹಕ್ಕುಪತ್ರ ನೀಡದೆ ಬಲಾಢ್ಯರಿಗೆ ಭೂಗಳ್ಳರಿಗೆ ಮಣೆ ಹಾಕಲಾಗುತ್ತಿದೆ. ನೋಂದಣಿ ಇಲಾಖೆ, ಸರ್ವೆ ಇಲಾಖೆ ಮತ್ತು ದಾಖಲೆ ಪಡೆಯುವುದಕ್ಕೆ ಇಂತಿಷ್ಟು ಹಣ ನಿಗದಿಪಡಿಸಲಾಗಿದ್ದು, ಮಧ್ಯವರ್ತಿಗಳಿಲ್ಲದೆ ಯಾವ ಕೆಲಸವೂ ಆಗುವುದಿಲ್ಲ. ಎಂಬುವಂತಾಗಿದೆ ಸಂಬಂಧಪಟ್ಟ ಸಚಿವರು ಧರಣಿ ಸ್ಥಳಕ್ಕೆ ಆಗಮಿಸಬೇಕು ಎಂದು ಒತ್ತಾಯಿಸಿ ಇಂದು ಹಿರಿಯೂರು ಪಟ್ಟಣದ ತಾಲೂಕು ಕಚೇರಿ ಮುಂದೆ ರಾಜ್ಯ ರೈತರ ಸಂಘ ಹಾಗೂ ಹಸಿರು ಸೇನೆ ಅನಿರ್ದಿಷ್ಟ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದೇವೆ ಎಂದು ರೈತ ಸಂಘದ ತಾಲೂಕು ಅಧ್ಯಕ್ಷ ಕೆ ಟಿ ತಿಪ್ಪೇಸ್ವಾಮಿ ಹೇಳಿದರು.
Kshetra Samachara
19/11/2024 03:52 pm