ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾಗಾಂಧಿ ಜಯಂತಿ ಆಚರಣೆ

ಕೋಲಾರ : ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಉಕ್ಕಿನ ಮಹಿಳೆ, ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ರವರ 107ನೇ ಜಯಂತಿ ಆಚರಿಸಲಾಯಿತು.

ಇಂದಿರಾ ಗಾಂಧಿ ಭಾವಚಿತ್ರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಪುಷ್ಪಾರ್ಚನೆ ಸಲ್ಲಿಸಿ ಗೌರವ ಸೂಚಿಸಿದರು.

ಈ ವೇಳೆ ಮಾತನಾಡಿದ ಕೋಲಾರ ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಕೆ.ವಿ.ಗೌತಮ್,ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು 20 ಅಂಶದ ಕಾರ್ಯಕ್ರಮಗಳನ್ನು ಜಾರಿಗೆ ತರುವ ಮೂಲಕ ಬಡವರು, ಶೋಷಿತರ ಕೈ ಬಲಪಡಿಸಿದರು, ಉಳುವವನೇ ಭೂಮಿಯ ಒಡೆಯ ಎಂಬ ಕಾನೂನು ಜಾರಿಗೆ ತರುವ ಮೂಲಕ ಭೂಮಿ ಇಲ್ಲದವರಿಗೆ ಭೂಮಿ ಕೊಡಿಸಿದರು. ಅನೇಕ ಜನ ಸಾಮಾನ್ಯರ ಕಲ್ಯಾಣ ಕಾರ್ಯಕ್ರಮಗಳನ್ನು ಅವರ ಆಡಳಿತ ಕಾಲದಲ್ಲಿ ಜಾರಿಗೆ ತಂದರು ಎಂದು ಹೇಳಿದ್ದರು .

Edited By : PublicNext Desk
Kshetra Samachara

Kshetra Samachara

19/11/2024 03:58 pm

Cinque Terre

240

Cinque Terre

0

ಸಂಬಂಧಿತ ಸುದ್ದಿ