ಧಾರವಾಡ : ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಎಐಕೆಕೆಎಂಎಸ್ ಸಂಘಟನೆ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ನರೇಗಾ ಕೂಲಿ ಕಾರ್ಮಿಕರಿಗೆ ಕನಿಷ್ಠ 200 ದಿನ ಕೆಲಸ 600 ರೂಪಾಯಿ ವೇತನ ನಿಗದಿಪಡಿಸಬೇಕು. ವಿದ್ಯುತ್ ಕಾಯ್ದೆ 2023ನ್ನು ವಾಪಸ್ ಪಡೆದು ರೈತರ ಪಂಪಸೆಟ್‌ಗಳಿಗೆ ಮೀಟರ್ ಹಾಕುವ ಪ್ರಕ್ರಿಯೆಯನ್ನು ಕೈಬಿಡಬೇಕು. ಬಗರಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಿ ಅವರ ಮೇಲಿನ ಕೇಸ್‌ಗಳನ್ನು ವಾಪಸ್ ಪಡೆಯಬೇಕು. ಜಿಲ್ಲೆಯಾದ್ಯಂತ ಹಾನಿಗೀಡಾದ ರೈತರ ಬೆಳೆಗಳಿಗೆ ಸೂಕ್ತ ಪರಿಹಾರ ನೀಡಬೇಕು. 60 ವರ್ಷ ದಾಟಿದ ರೈತರಿಗೆ ಮಾಸಿಕ ಕನಿಷ್ಠ 10 ಸಾವಿರ ಪಿಂಚಣಿ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
Kshetra Samachara
19/11/2024 06:27 pm