ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ಕೈ ಸರ್ಕಾರದ ಭ್ರಷ್ಟಾಚಾರದಿಂದ ರಾಜ್ಯ ದಿವಾಳಿ - ಛಲವಾದಿ ನಾರಾಯಣಸ್ವಾಮಿ

ಮುಳಬಾಗಿಲು :ಆಡಳಿತ ರೂಢ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದಿಂದ ರಾಜ್ಯ ದಿವಾಳಿಯಾಗಿದೆ. ಈಗ ಪರೋಕ್ಷವಾಗಿ 5 ಗ್ಯಾರಂಟಿಗಳನ್ನು ನಿಲ್ಲಿಸುವ ಹುನ್ನಾರ ನಡೆಸಿದೆ ಎಂದು ವಿಧಾನ ಪರಿಷತ್ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಇಲ್ಲಸಲ್ಲದ ನೆಪಗಳ ಹೆಸರಿನಲ್ಲಿ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡುತ್ತಿದ್ದು ಇದು ಒಂದು ಲೂಟಿ ಸರ್ಕಾರ ಎಂದರು.

ವಕ್ಫ್ ಕಾಯ್ದೆ ರದ್ದು ಮಾಡಲಿ ಕೇಂದ್ರದಲ್ಲಿ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕಿಗಾಗಿ ವಕ್ಫ್ ಕಾಯಿದೆ ಮಾಡಿದ್ದಾರೆ. ನೆಹರೂ, ಇಂದಿರಾಗಾಂಧಿ, ರಾಜೀವ್ ಗಾಂಧಿ, ನರಸಿಂಹರಾವ್ ಅಧಿಕಾರದಲ್ಲಿದ್ದಾಗ ಈ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ಕಾಂಗ್ರೆಸ್ ಮುಸ್ಲಿಂಪರ ಎಂದು ಬಿಂಬಿಸಿದ್ದಾರೆ. ಇದರಿಂದ ಈಗ ಇಲ್ಲಿನ ಮೂಲ ನಿವಾಸಿಗಳಿಗೆ ದಕ್ಕೆಯಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಈ ವಕ್ಫ ಕಾಯ್ದೆಯನ್ನು ರದ್ದುಪಡಿಸಲು ಮುಂದಾಗ ಬೇಕು ಎಂದು ಒತ್ತಾಯಿಸಿದರು.

Edited By : PublicNext Desk
PublicNext

PublicNext

19/11/2024 08:18 pm

Cinque Terre

15.81 K

Cinque Terre

0

ಸಂಬಂಧಿತ ಸುದ್ದಿ