ತುಮಕೂರು : ಅಪಘಾತದಲ್ಲಿ ನಿಧನರಾದ ಅಗ್ನಿಶಾಮಕ ಶಾಮಕ ವಾಹನ ಚಾಲಕನ ಪತ್ನಿಗೆ ಸರ್ಕಾರದಿಂದ ಆದೇಶ ಬಂದ ಕ್ಷಣದಲ್ಲೇ ಅನುಕಂಪದ ಉದ್ಯೋಗ ನೀಡಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾನವೀಯತೆ ಮೆರೆದಿದ್ದಾರೆ.
ತುರುವೇಕೆರೆ ತಾಲೂಕು ಡಿ ಕಲ್ಕೆರೆಯ ಪರಮೇಶ್ವರ್ ಅಗ್ನಿಶಾಮಕ ವಾಹನದ ಚಾಲಕರಾಗಿ ಉದ್ಯೋಗದಲ್ಲಿದ್ದರು. ಕರ್ತವ್ಯ ಮುಗಿಸಿ ಮನೆಗೆ ಬರುವಾಗ 2023ರಲ್ಲಿ ಅಪಘಾತದಲ್ಲಿ ಮೃತರಾಗಿದ್ದರು. ಈ ಪ್ರಕರಣ ಇಲಾಖೆ ಹಂತದಲ್ಲಿ ಇತ್ಯರ್ಥವಾಗಿ ಪ್ರಾದೇಶಿಕ ಆಯುಕ್ತರ ಕಚೇರಿಯಿಂದ ಆದೇಶವಾಗಿತ್ತು.
ತಕ್ಷಣ ಜಿಲ್ಲಾಧಿಕಾರಿಗಳು ತಮ್ಮ ಸಿಬ್ಬಂದಿ ಮೂಲಕ ಮೃತ ಪರಮೇಶ್ವರ್ ಅವರ ಪತ್ನಿ ರೋಹಿಣಿ ಅವರನ್ನು ಕಚೇರಿಗೆ ಕರೆದು ಮಾತನಾಡಿಸಿದರು. ಮೂರು ವರ್ಷದ ತಮ್ಮ ಮಗು ಹಾಗೂ ಅತ್ತೆಯೊಂದಿಗೆ ಬಂದಿದ್ದ ರೋಹಿಣಿಯವರನ್ನು ತಮ್ಮ ಕಚೇರಿಯಲ್ಲೇ ಕೂರಿಸಿಕೊಂಡು ಕೇವಲ ಅರ್ಧ ತಾಸಿನಲ್ಲಿ ಅನುಕಂಪದ ಉದ್ಯೋಗದ ನೇಮಕಾತಿ ಆದೇವನ್ನು ಸಂತ್ರಸ್ಥ ಮಹಿಳೆಗೆ ನೀಡಿದರು.
ಕುಣಿಗಲ್ ತಾಲೂಕಿನಲ್ಲಿ ಡಿ ವರ್ಗದ ನೌಕರರಾಗಿ ನೇಮಕಾತಿಗೆ ಆದೇಶಿಸಿ ರೋಹಿಣಿಯವರಿಗೆ ಆದೇಶ ಪತ್ರ ನೀಡಿದರು.
PublicNext
20/11/2024 08:07 am