ಬೆಳಗಾವಿ : ಬಿಮ್ಸ್ ನಲ್ಲಿ ಮಂಗಳವಾರ ಬಾಣಂತಿ ಸಾವನ್ನಪ್ಪಿದ್ದು, ಮಾಧ್ಯಮಗಳಲ್ಲಿ ನೋಡಿದ್ದೇನೆ. ತಪ್ಪಿತಸ್ಥ ವೈದ್ಯರ ಮೇಲೆ ಆದಷ್ಟು ಬೇಗ ಕಠಿಣ ಕ್ರಮವಾಗಬೇಕು. ನಾವು ಬರೀ ಹೇಳೋದು ಆಗಬಾರದು, ಕಠಿಣ ಕ್ರಮವಾಗಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬೀಮ್ಸ್ ನ ಎಲ್ಲಾ ವ್ಯವಸ್ಥೆಯಲ್ಲೂ ಸರ್ಜರಿ ಆಗಬೇಕೆಂದು ನಾನು ಮೊದಲಿನಿಂದಲೂ ಹೇಳುತ್ತಿರುವೆ. ಶಿಸ್ತು, ಆರೋಗ್ಯ ದೃಷ್ಟಿಯಿಂದ ಡಾಕ್ಟರ್, ನರ್ಸ್‌ಗಳು ಎಲ್ಲವನ್ನು ಸರಿಪಡಿಸುವ ಕೆಲಸವಾಗಬೇಕು. ನಾನು ಭೇಟಿ ನೀಡಿ ಪರಿಶೀಲನೆ ಮಾಡಿರುವೆ, ಮತ್ತೊಮ್ಮೆ ಭೇಟಿ ನೀಡಿ ಪರಿಶೀಲನೆ ಮಾಡುವೆ ಎಂದರು.
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ರದ್ದು ವಿಚಾರವಾಗಿ ಮಾತನಾಡಿದ ಅವರು, ಎಪಿಎಲ್ ಮತ್ತು ಬಿಪಿಎಲ್ ಕಾರ್ಡ ಹೊಂದಿದವರಿಗೆ, ಯಾರು ತೆರಿಗೆ ಕಟ್ಟುವುದಿಲ್ಲ ಅಂತವರಿಗೆ ಗೃಹಲಕ್ಷ್ಮೀ ಹಣ ಬರುತ್ತೆ. 80 ಸಾವಿರ ಬಿಪಿಎಲ್ ಕಾರ್ಡ್ ಗಳನ್ನು ರದ್ದತಿ ಮಾಡೋ ಬದಲು ಎಪಿಎಲ್ ಗೆ ವರ್ಗವಾಣೆ ಮಾಡಿದ್ದಾರೆ. ವರ್ಗಾವಣೆ ಮಾಡಿರೋದರಿಂದ ಯಾವುದೇ ಗೊಂದಲ ಇಲ್ಲ, ಎಪಿಎಲ್ ಬಿಪಿಎಲ್ ಇದ್ದವರಿಗೆ ಗೃಹಲಕ್ಷ್ಮೀ ಹಣ ಬರುತ್ತೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಖರೀದಿ ವಿಚಾರವಾಗಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಈ ರೀತಿಯ ವ್ಯವಹಾರ ನಡೆಯುತ್ತಿದೆ. ಬಿಜೆಪಿಯವರು ನಿರಂತರವಾಗಿ ಇಂತಹ ಪ್ರಯತ್ನ ಮಾಡ್ತಿದ್ದಾರೆ. ನಾವು ಗಟ್ಟಿಯಾಗಿದ್ದೇವೆ, ಸುಭದ್ರವಾಗಿರೋ ಸರ್ಕಾರವನ್ನು ಏನು ಮಾಡಲಿಕ್ಕೆ ಸಾಧ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ಸಂಪುಟದ ಖಾತೆ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಗಮನಕ್ಕೆ ಬಂದಿಲ್ಲ, ಖಾತೆ ಬದಲಾವಣೆ ಚರ್ಚೆ ಆಗಿಲ್ಲ. ಬೆಳಗಾವಿ ಅಧಿವೇಶ ಡಿ. 9 ರಿಂದ ದಿನಗಳ ಕಾಲ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನ ಮಾಡಿದೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ಆಗಬೇಕು, ಪರಿಹಾರ ಸಿಗಬೇಕು ಅನೋ ನಿಟ್ಟಿನಲ್ಲಿ ಸುವರ್ಣಸೌಧದಲ್ಲಿ ಅಧಿವೇಶನ ನಡೆಯಲಿದೆ ಎಂದರು.
PublicNext
20/11/2024 03:47 pm