ಚಿಕ್ಕಮಗಳೂರು: ನವೆಂಬರ್ 19 ರಿಂದ ಡಿಸೆಂಬರ್ 05 ರವರೆಗೆ ಜಿಲ್ಲೆಯಾದ್ಯಂತ ನಮ್ಮ ಶೌಚಾಲಯ ನಮ್ಮ ಗೌರವ ವಿಶೇಷ ಆಂದೋಲನ ಹಮ್ಮಿಕೊಂಡಿದ್ದು ಎಲ್ಲಾ ಸರ್ಕಾರಿ ಕಚೇರಿಗಳ ವೈಯಕ್ತಿಕ ಹಾಗೂ ಸಾರ್ವಜನಿಕ ಶೌಚಾಲಯಗಳು ಬಳಕೆಗೆ ಯೋಗ್ಯವಾಗಿರುವಂತೆ ಸುಸ್ಥಿತಿಯಲ್ಲಿರಿಸಿಕೊಂಡು ಶುಚಿತ್ವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೀರ್ತನಾ ಹೆಚ್.ಎಸ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ ಕುರಿತು ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರಿಗೂ ಆರೋಗ್ಯ ಬಹು ಮುಖ್ಯ. ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ನಮ್ಮ ಸುತ್ತಮುತ್ತಲಿನ ಪರಿಸರವನ್ನು ಉತ್ತಮ ರೀತಿಯಲ್ಲಿರಿಸಿಕೊಳ್ಳಬೇಕು. ಬಯಲು ಬಹಿರ್ದಸೆಯಿಂದ ಪರಿಸರ ಮಲಿನಗೊಳ್ಳುವುದಲ್ಲದೆ. ನಮ್ಮ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಗ್ರಾಮೀಣ ಸಮುದಾಯದ ಜನರಲ್ಲಿ ಸುರಕ್ಷಿತ ನೈರ್ಮಲ್ಯ, ಶುಚಿತ್ವ ಬಗ್ಗೆ ಅರಿವು ಮೂಡಿಸಿ ಪ್ರತಿಯೊಬ್ಬರು ಶೌಚಾಲಯ ಬಳಸುವಂತೆ ಪ್ರೇರೆಪಿಸಲು ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ ಸಹಕಾರಿಯಾಗಲಿದೆ ಎಂದರು.
PublicNext
20/11/2024 03:55 pm