ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ವಿದ್ಯಾರ್ಥಿಗಳಿಗೆ ಸಹಪಠ್ಯ ಚಟುವಟಿಕೆ ಕಲಿಕೆಗೆ ಪೂರಕ - ಪ್ರಾಚಾರ್ಯ ಜಯರಾಮ ಲಮಾಣಿ

ನವಲಗುಂದ : ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಸಹಪಠ್ಯ ಚಟುವಟಿಕೆಗಳು ಉತ್ತಮ ಮನರಂಜನೆ ಜೊತೆಗೆ ಕಲಿಕೆಗೆ ಪೂರಕ ಉತ್ತೇಜನ ನೀಡುತ್ತವೆ ಎಂದು ಶಂಕರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಜಯರಾಮ ಲಮಾಣಿ ಹೇಳಿದರು.

ಅವರು ಪಟ್ಟಣದ ಶ್ರೀ ಶಂಕರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಪದವಿಪೂರ್ವ ಪ್ರಥಮ ಹಾಗೂ ದ್ವಿತೀಯ ವರ್ಗದ ವಿದ್ಯಾರ್ಥಿಗಳಿಗೆ 2024-25 ಸಾಲಿನ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆಯನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಪ್ರಾಸಾವಿಕವಾಗಿ ಮಾತಾಡಿದ ಭೀಮರಾಶಿ ಹೂಗಾರ, ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆಯು ತಾಲೂಕು, ಜಿಲ್ಲೆ, ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಿ ಮಕ್ಕಳ ಪ್ರತಿಭಗೆ ಸೂಕ್ತ ಅವಕಾಶ ಕಲ್ಪಿಸಿದೆ ವಿದ್ಯಾರ್ಥಿಗಳು ಅದರ ಪ್ರಯೋಜನ ಪಡೆಯಬೇಕೆಂದು ತಿಳಿಸಿದರು.

ನಂತರ ವಿದ್ಯಾರ್ಥಿಗಳು ರಸಪ್ರಶ್ನೆ, ಚಚೆ೯, ಪ್ರಬಂಧ, ಜನಪದ ಗೀತೆ, ಭಾವಗೀತೆ, ಭಕ್ತಿಗೀತೆ, ಏಕಪಾತ್ರಾಭಿನಯ, ಆಶುಭಾಷಣ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು.

Edited By : PublicNext Desk
Kshetra Samachara

Kshetra Samachara

20/11/2024 04:02 pm

Cinque Terre

10.25 K

Cinque Terre

0

ಸಂಬಂಧಿತ ಸುದ್ದಿ