ಚಿಕ್ಕಮಗಳೂರು : ನಗರದ ಆಟೋ ಚಾಲಕರು ಮತ್ತು ಮಾಲೀಕರ ಸಂಘದಿಂದ ನವೆಂಬರ್ 22 ರಿಂದ 24ರ ವರೆಗೆ ಕನ್ನಡ ರಾಜ್ಯೋತ್ಸವವನ್ನು ವಿವಿಧ ಕಾರ್ಯಕ್ರಮಗಳ ಮೂಲಕ ಆಚರಿಸಲಾಗುವುದು ಎಂದು ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
ನವೆಂಬರ್ 22 ಶುಕ್ರವಾರದಂದು ಆಟೋ ಚಾಲಕರು ಮತ್ತು ಮಾಲೀಕರಿಗೆ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. 23 ಶನಿವಾರ ರಂದು ನಗರದ ಆಶಾಕಿರಣ ಅಂಧ ಮಕ್ಕಳ ಶಾಲೆ ಹಾಗೂ ಜೀವನ ಸಂಧ್ಯಾ ವೃದ್ಧಾಶ್ರಮ ಮತ್ತು ಅನ್ನಪೂರ್ಣ ವೃದ್ಧಾಶ್ರಮಗಳಲ್ಲಿ ಭೋಜನದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.
24 ಭಾನುವಾರದಂದು ಬೆಳಿಗ್ಗೆ 8:00 ಗೆ ನಗರದ ವಂದೇ ಮಾತರಂ ನಿಲ್ದಾಣದಲ್ಲಿ ಧ್ವಜಾರೋಹಣ ಮೂಲಕ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದು, ಒಂದು ಸಂಜೆ ಆರು ಗಂಟೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.
Kshetra Samachara
20/11/2024 04:54 pm