ಕುಂದಗೋಳ : ಸರ್ಕಾರಿ ಸಮಯಕ್ಕೆ ಚಕ್ಕರ್ ಹಾಕಿ ತಮಗೆ ತಿಳಿದ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗುತ್ತಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಿಬ್ಬಂದಿಗಳಿಗೆ ಪಬ್ಲಿಕ್ ನೆಕ್ಸ್ಟ್ ವರದಿ ಫಲವಾಗಿ ನೋಟಿಸ್ ಜಾರಿ ಮಾಡಲಾಗಿದೆ.
ಹೌದು ! ಕುಂದಗೋಳ ತಾಲೂಕಿನ 156 ಸರ್ಕಾರಿ ಶಾಲೆಗಳ ಜವಾಬ್ದಾರಿ ಮತ್ತು ಸಾರ್ವಜನಿಕರ ಕೆಲಸ ಅಗತ್ಯ ಸಮಯಕ್ಕೆ ಮಾಡಬೇಕಾದ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಿಬ್ಬಂದಿಗಳು ಸರ್ಕಾರಿ ಸಮಮಕ್ಕೆ ಚಕ್ಕರ್ ಹಾಕುವ ಜಿ.ಪಿ.ಎಸ್ ವಿಡಿಯೋ ಸಮೇತ ಪಬ್ಲಿಕ್ ನೆಕ್ಸ್ಟ್ ವರದಿ ಬಿತ್ತರಿಸಿತ್ತು.
ಸದ್ಯ ಪಬ್ಲಿಕ್ ನೆಕ್ಸ್ಟ್ ವರದಿ ಪ್ರಸಾರದ ಬಳಿಕ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವಿ ಮಾಡಲಗೇರಿ ಅವರು ನೋಟಿಸ್ ಪುಸ್ತಕದಲ್ಲಿ ಸಿಬ್ಬಂದಿಗಳಿಗೆ ನೋಟಿಸ್ ನೀಡಿ ಶೀಘ್ರವೇ ಬಯೋಮೆಟ್ರಿಕ್ ವ್ಯವಸ್ಥೆ ಜಾರಿ ಮಾಡುವ ಭರವಸೆ ನೀಡಿದ್ದಾರೆ.
ಒಟ್ಟಾರೆ ಸರ್ಕಾರಿ ಇಲಾಖೆಗಳಲ್ಲಿ ಇ-ಹಾಜರಾತಿ ಕಡ್ಡಾಯ ಇದ್ದರೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಬಜೆಟ್ ಕೊರತೆಯಿಂದ ಇಂದಿಗೂ ಬಯೋಮೆಟ್ರಿಕ್ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗಿಲ್ಲಾ.
ಈ ಬಗ್ಗೆ ಸಂಬಂಧಪಟ್ಟ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್.ಕೆಳದಿಮಠ ಅವರೇ ಗಮನಿಸಿ ಶಿಕ್ಷಣ ಇಲಾಖೆ ಮೂಲ ವ್ಯವಸ್ಥೆಗೆ ಬಜೆಟ್ ಭಾಗ್ಯ ಕಲ್ಪಿಸಬೇಕಿದೆ.
ಪಬ್ಲಿಕ್ ನೆಕ್ಸ್ಟ್ ಇಂಪ್ಯಾಕ್ಟ್ : ಶ್ರೀಧರ ಪೂಜಾರ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
20/11/2024 05:54 pm