ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಿಷೇಧಿತ ರೋಗರ್ ಕೀಟನಾಷಕ ಜಪ್ತಿ.....

ತುಮಕೂರು

ತಾಲ್ಲೂಕಿನ ಹೆಬ್ಬೂರು ಗ್ರಾಮದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಆಗ್ರೋಟೆಕ್ ಕೀಟನಾಶಕ ಮಾರಾಟ ಮಳಿಗೆಯಲ್ಲಿ ಮಾರಾಟ ಮಾಡಲಾಗುತ್ತಿದ್ದ ಅಂದಾಜು ೭೨೮೬ ರೂ. ಮೌಲ್ಯದ ೧೦.೨ ಲೀಟರ್ ಪ್ರಮಾಣದ ಡೈಮಿಥೋಯೇಟ್-೩೦% ಇ.ಸಿ.(ರೋಗಾರ್) ಎಂಬ ನಿಷೇಧಿತ ಕೀಟನಾಶಕವನ್ನು ಕೃಷಿ ಇಲಾಖೆಯ ಜಾರಿದಳ ವಿಭಾಗವು ಜಪ್ತಿ ಮಾಡಿ ಇಲಾಖೆ ವಶಕ್ಕೆ ಪಡೆಯಲಾಗಿದೆ ಎಂದು ಕೀಟನಾಶಕ ಪರಿವೀಕ್ಷಕ ಹಾಗೂ ಸಹಾಯಕ ಕೃಷಿ ನಿರ್ದೇಶಕ ಪುಟ್ಟರಂಗಪ್ಪ ತಿಳಿಸಿದ್ದಾರೆ.

ತರಕಾರಿ ಮತ್ತು ಹಣ್ಣಿನ ಬೆಳೆಗಳಿಗೆ ಈ ಕೀಟನಾಶಕ ಬಳಸುವುದನ್ನು ನಿಷೇಧ ಮಾಡಿದ್ದರೂ ಸಹ ಲೇಬಲ್‌ನಲ್ಲಿ ನಮೂದಿಸಿ ನ್ಯೂ ಪ್ಯಾಕ್ ಆಗ್ರೋ ಕೆಮ್ ಕಂಪನಿಯು ಡೈಮಿಥೋಯೇಟ್-೩೦% ಇ.ಸಿ., (ರೋಗಾರ್) ಎಂಬ ಕೀಟನಾಶಕವನ್ನು ಉತ್ಪಾದನೆ ಮಾಡಿ ಮಾರಾಟ ಮಾಡುತ್ತಿದ್ದರಿಂದ ಜಪ್ತಿ ಮಾಡಲಾಗಿದೆ.

ಕೃಷಿ ಇಲಾಖೆಯ ಜಾರಿದಳ ವಿಭಾಗವು ನವೆಂಬರ್ ೧೯ರಂದು ಶ್ರೀ ಲಕ್ಷ್ಮೀ ವೆಂಕಟೇಶ್ವರ ಆಗ್ರೋಟೆಕ್ ಕೀಟನಾಶಕ ಮಾರಾಟ ಮಳಿಗೆ ಮೇಲೆ ದಾಳಿ ಮಾಡಿ ನಿಯಮಾನುಸಾರ ಪರಿಶೀಲಿಸಿದಾಗ, ಮೇಲ್ಕಂಡ ಉಲ್ಲಂಘನೆ ಕಂಡು ಬಂದಿತ್ತು. ಕಳೆದ ಬಾರಿ ಕ್ಷೇತ್ರ ಭೇಟಿ ಸಂದರ್ಭದಲ್ಲಿ ನಿಷೇಧಿತ ಕೀಟನಾಶಕ ದಾಸ್ತಾನಿಗೆ ಮಾರಾಟ ತಡೆ ಆದೇಶ ಜಾರಿಗೊಳಿಸಿ ಸಂಬಂಧಿಸಿದ ಮಾರಾಟಗಾರರು, ಸರಬರಾಜುದಾರರು, ವಿತರಕರು ಮತ್ತು ಉತ್ಪಾದಕರಿಗೆ ನೋಟೀಸ್ ಜಾರಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಸಮಜಾಯಿಷಿ ನೀಡಲು ಕ್ರಮ ಕೈಗೊಳ್ಳಲಾಗಿತ್ತು, ಆದರೆ ಉತ್ಪಾದಕ ಕಂಪನಿಯು ಸೂಕ್ತ ದಾಖಲೆಗಳನ್ನು ಸಲ್ಲಿಸದೇ ಇರುವ ಕಾರಣ ಕೀಟನಾಶಕ ಕಾಯ್ದೆ ೧೯೬೮ ಮತ್ತು ಕೀಟನಾಶಕ ನಿಯಮಗಳು ೧೯೭೧ರ ಉಲ್ಲಂಘನೆ ಮೇರೆಗೆ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಸದರಿ ಕೀಟನಾಶಕದ ಮಾದರಿಯನ್ನು ತೆಗೆದು ಗುಣ ನಿಯಂತ್ರಣ ವಿಶ್ಲೇಷಣೆಗೆ ಕಳುಹಿಸಿಕೊಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

20/11/2024 06:24 pm

Cinque Terre

1.82 K

Cinque Terre

0

ಸಂಬಂಧಿತ ಸುದ್ದಿ